ನವದೆಹಲಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು (75th Republic Day) ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ವರ್ಣರಂಜಿತ ಪೇಟ ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.
ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು (Modi Turban) ಆಯ್ಕೆ ಮಾಡಿದರು. ಗುಲಾಬಿ ಮತ್ತು ಕಿತ್ತಳೆ ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸುವ ಮೂಲಕ ಭಗವಾನ್ ರಾಮನಿಗೆ ಗೌರವ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವರ್ಷ ಮೋದಿ ಅವರು ಬಿಳಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ.
Advertisement
Advertisement
ಒಟ್ಟಿನಲ್ಲಿ ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು (Narendra Modi) ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!
Advertisement
Advertisement
ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ ಎರಡು ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ವಾಸ್ತವವಾಗಿ ಪ್ರಧಾನಿಯವರು ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಯ ಬಗ್ಗೆ ಗೌರವವನ್ನು ತೋರಿಸುವ ಪ್ರಯತ್ನ ಮಾಡುತ್ತಾರೆ.