ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ (Gautam Adani) ಮತ್ತು ಅವರ ಕಾರ್ಯನಿರ್ವಾಹಕರ ವಿರುದ್ಧ ಸಮನ್ಸ್ ನೀಡಲು ಅಥವಾ ಬಂಧನ ವಾರಂಟ್ ನೀಡಲು ಅಮೆರಿಕದಿಂದ (USA) ಭಾರತ ಯಾವುದೇ ವಿನಂತಿಯನ್ನು ಸ್ವೀಕರಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.
ವಾರದ ಸುದ್ದಿಗೋಷ್ಠಿಯಲ್ಲಿ ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಪ್ರತಿಕ್ರಿಯಿಸಿ ಇದು ಖಾಸಗಿ ಸಂಸ್ಥೆ, ವ್ಯಕ್ತಿ ಮತ್ತು ಅಮೆರಿಕ ನ್ಯಾಯಾಂಗ ಇಲಾಖೆಯನ್ನು ಒಳಗೊಂಡಿರುವ ಕಾನೂನು ವಿಷಯ ಎಂದು ತಿಳಿಸಿದರು. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್
Advertisement
#WATCH | Delhi: On the Adani indictment issue, MEA Spokesperson Randhir Jaiswal says, “This is a legal matter involving private firms and individuals and the US Department of Justice. There are established procedures and legal avenues in such cases which we believe would be… pic.twitter.com/w8CCLqU660
— ANI (@ANI) November 29, 2024
ಸಮನ್ಸ್ ಅಥವಾ ಬಂಧನ ವಾರಂಟ್ ಸೇವೆಗಾಗಿ ವಿದೇಶಿ ಸರ್ಕಾರದ ಯಾವುದೇ ವಿನಂತಿಯು ಪರಸ್ಪರ ಕಾನೂನು ನೆರವಿನ ಭಾಗವಾಗಿದೆ ಮತ್ತು ಅಂತಹ ವಿನಂತಿಗಳನ್ನು ಸ್ವೀಕರಿಸಿದಾಗ ಅರ್ಹತೆಗಳ ಮೇಲೆ ಪರಿಶೀಲಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: 2007ರ ಘಟನೆ ಉಲ್ಲೇಖಿಸಿ ಎಂಜೆಲಾ ಮರ್ಕೆಲ್ ಬಳಿ ಈಗ ಕ್ಷಮೆ ಕೇಳಿದ ಪುಟಿನ್
Advertisement
ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಅಧಿಕಾರಿಗಳ ವಿರುದ್ಧ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಇಲಾಖೆ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿದೆ.