ಲಕ್ನೋ: ಉತ್ತರ ಪ್ರದೇಶದ ಸಂಭಾಲ್‍ನ ಬಿಜೆಪಿ (BJP) ನಾಯಕ ಅನುಜ್ ಚೌಧರಿಯನ್ನು (Anuj Chaudhary) ಮೊರಾದಾಬಾದ್‍ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
34 ವರ್ಷದ ಶ್ರೀ ಚೌಧರಿಯವರು ತಮ್ಮ ಅಪಾರ್ಟ್‍ಮೆಂಟ್‍ನ ಹೊರಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚೌಧರಿ ಮೇಲೆ ಅನೇಕ ಬಾರಿ ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಮೊರಾದಾಬಾದ್‍ನ ಬ್ರೈಟ್‍ಸ್ಟಾರ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ರಾಜಕೀಯದಲ್ಲಿ ಸಕ್ರಿಯ ಭಾಗವಾಗಿರುವ ಚೌಧರಿ ಅವರು ಸಂಭಾಲ್‍ನ ಅಸ್ಮೋಲಿ ಬ್ಲಾಕ್‍ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಸದ್ಯ ಚೌಧರಿ ಹತ್ಯೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಕುಟುಂಬ ಗಂಭೀರ ಆರೋಪ ಮಾಡಿದೆ. ಅಲ್ಲದೆ ಅಮಿತ್ ಚೌಧರಿ ಮತ್ತು ಅನಿಕೇತ್ ಎಂಬ ಇಬ್ಬರ ಹೆಸರನ್ನು ಕೂಡ ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಬಂದ್ ಆಗುತ್ತಾ 300ಕ್ಕೂ ಹೆಚ್ಚು ಶಾಲೆ..?
ಎರಡೂ ಪಕ್ಷಗಳ ನಡುವೆ ವೈಯಕ್ತಿಕ ಪೈಪೋಟಿ ಇತ್ತು. ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೊರಾದಾಬಾದ್ ಪೊಲೀಸರು ಹೇಳಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]