ನಿಂತಿದ್ದ ಅಂಬುಲೆನ್ಸ್‌ಗೆ ಕಾರು ಡಿಕ್ಕಿ – ಐವರು ಸಾವು, 12 ಮಂದಿಗೆ ಗಾಯ

Public TV
1 Min Read
mumbai 1

ಮುಂಬೈ: ನಿಂತಿದ್ದ ಕಾರು ಮತ್ತು ಅಂಬುಲೆನ್ಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ (Mumbai) ಬಾಂದ್ರಾ-ವರ್ಲಿ (Bandra-Worli) ಸಮುದ್ರ ಬಳಿ ನಡೆದಿದೆ.

ಬುಧವಾರ ಮುಂಜಾನೆ 3:30ರ ಸುಮಾರಿಗೆ ಅಂಬುಲೆನ್ಸ್ ಮತ್ತು ಇತರ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ. ಈ ಮುನ್ನವೇ ಮೊನ್ನೆ ರಾತ್ರಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಬಾಂದ್ರಾದಲ್ಲಿ ವರ್ಲಿ ಲೇನ್‍ಗೆ ಕರೆದೊಯ್ಯಲು ಅಂಬುಲೆನ್ಸ್ ಕರೆಸಿ ಸಿದ್ಧತೆ ನಡೆಸಲಾಗುತ್ತಿತ್ತು. ಆದರೆ ಇದೇ ವೇಳೆ ಅತಿವೇಗವಾಗಿ ಬಂದ ಕಾರೊಂದು ವಾಹನಕ್ಕೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೆಹಲಿಯಲಿದ್ದ 500 ರೂ. ಮಾಸ್ಕ್ ಫೈನ್ ವಾಪಸ್ – 6 ತಿಂಗಳ ಬಳಿಕ ರಿಲೀಫ್

ಈ ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ (Prime Minister’s Office) ಟ್ವೀಟ್ ಮಾಡಿದ್ದು, ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‍ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಾಂತ್ವದ ಹೇಳಿದ್ದಾರೆ. ಇದನ್ನೂ ಓದಿ: ಒಂದೇ ಗ್ರಾಮ, ಒಂದೇ ಗೋತ್ರ ವಿವಾಹ ನಿಷೇಧಕ್ಕೆ ಸರ್ವ ಜಾತಿಯ ಖಾಪ್ ಮಹಾಪಂಚಾಯತ್ ಒತ್ತಾಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *