ಅಪರಿಚಿತರಿಂದ ಗುಂಡಿನ ದಾಳಿ – ಅಂಗಡಿ ಮಾಲೀಕ ಸ್ಥಳದಲ್ಲೇ ಸಾವು

Public TV
1 Min Read
crime 2

ಚಂಡೀಗಢ: ಇಬ್ಬರು ಬಂದೂಕುಧಾರಿಗಳು ಅಂಗಡಿಯ ಮಾಲೀಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಪಂಜಾಬ್‍ನ (Punjab) ಭಟಿಂಡಾದಲ್ಲಿ ನಡೆದಿದೆ. ಅಂಗಡಿಯ ಹೊರಗೆ ಕುಳಿತಿದ್ದ ವೇಳೆ ಬೈಕ್‍ನಲ್ಲಿ ಬಂದ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಜೋಹಾಲ್ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡೇಟಿನಿಂದ ಜೋಹಲ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗುಂಡು ಹಾರಿಸಿದ ಬಳಿಕ ಆರೋಪಿಗಳು ಬೈಕ್‍ನಲ್ಲಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕೆಲವರು ಈ ವೇಳೆ ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಇಬ್ಬರ ಗುರುತು ಪತ್ತೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ಬಿಜೆಪಿ (BJP) ನಾಯಕ ರೂಪಚಂದ್ ತೀವ್ರವಾಗಿ ಖಂಡಿಸಿದ್ದಾರೆ. ಎಎಪಿ (AAP) ಆಡಳಿತದ ಪಂಜಾಬ್‍ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

Web Stories

Share This Article