ಲಕ್ನೋ: ಇಬ್ಬರು ಹೆಣ್ಣು ಮಕ್ಕಳನ್ನು ಹೆತ್ತ ಕಾರಣಕ್ಕೆ ಮಹಿಳೆಯೊಬ್ಬಳಿಗೆ ಪತಿ ಹಾಗೂ ಆತನ ಕುಟುಂಬಸ್ಥರು ರಸ್ತೆಯಲ್ಲಿ ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ.
ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಗು ಬೇಕೆಂದು ಪತಿ ಮತ್ತು ಅತ್ತೆಯಂದಿರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಮತ್ತು ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಕಾನ್ಪುರದಲ್ಲಿ ಘರ್ಷಣೆ – ಸಾವಿರ ಮಂದಿ ಮೇಲೆ ಎಫ್‍ಐಆರ್, 18 ಮಂದಿ ಅರೆಸ್ಟ್
Advertisement
Advertisement
ನನ್ನ ಗಂಡ ಮತ್ತು ಅತ್ತೆಯಂದಿರು ನನಗೆ ಗಂಡು ಮಗುವಾಗಲಿಲ್ಲ ಅಂತ ಚಿತ್ರಹಿಂಸೆ ನೀಡುತ್ತಿದ್ದರು. ಅದರಲ್ಲಿಯೂ ನನಗೆ ಎರಡನೇ ಬಾರಿ ಹೆಣ್ಣು ಮಗು ಹುಟ್ಟಿದ ನಂತರ ಹೆಚ್ಚಾಗಿ ಕಿರುಕುಳ ನೀಡುತ್ತಿದ್ದರು. ಹಸಿವಿನಿಂದ ಬಳಲುತ್ತಿದ್ದರು ಎಷ್ಟೋ ಬಾರಿ ಊಟ ಹಾಕುತ್ತಿರಲಿಲ್ಲ. ಬಳಿಕ ನಾನೇ ಕೂಲಿ ಕೆಲಸಕ್ಕೆ ಹೋಗಲು ಆರಂಭಿಸಿದೆ ಎಂದು ಹೇಳಿದ್ದಾಳೆ.
Advertisement
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಮಹಿಳೆಗೆ ನಿಂದಿಸುವುದು, ಕಾಲಿನಿಂದ ಒದೆಯುವುದು ಮತ್ತು ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೆಳೆ ಮಹಿಳೆ ಗಳಗಳನೆ ಕಣ್ಣೀರು ಹಾಕುತ್ತಾ ಹಲ್ಲೆ ಮಾಡದಂತೆ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ತಲ್ವಾರ್‌ನಲ್ಲಿ ಕೇಕ್ ಕಟ್ – ಮೂವರ ಬಂಧನ
Advertisement
ಇದೀಗ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಹೋಬಾದ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ಹೇಳಿದ್ದಾರೆ.