ಭೋಪಾಲ್: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಚೀತಾ (Cheetah) ಸರಣಿ ಸಾವಿನ ಕುರಿತಂತೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ಕೇಂದ್ರದ (Central Government) ಪ್ರತಿಕ್ರಿಯೆಯನ್ನು ಕೇಳಿದೆ. ಒಂದು ವರ್ಷದೊಳಗೆ ಸಂಭವಿಸಿರುವ 8 ಚೀತಾಗಳ ಸಾವು ಉತ್ತಮ ಬೆಳವಣಿಗೆಯಲ್ಲ ಎಂದು ಕೋರ್ಟ್ ಹೇಳಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಕೇಂದ್ರಕ್ಕೆ ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಬೇಡಿ ಎಂದಿದೆ. ಅಲ್ಲದೇ ಮೇ ತಿಂಗಳಿನ ತನ್ನ ಶಿಫಾರಸ್ಸನ್ನು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಈಗ ನೆಲೆಗೊಂಡಿರುವ ರಾಜ್ಯವನ್ನು ಲೆಕ್ಕಿಸದೆ ಅವುಗಳಿಗೆ ಪರ್ಯಾಯ ಆವಾಸ ಸ್ಥಾನಗಳ ಆಯ್ಕೆಗಳನ್ನು ಹುಡುಕಲು ಕೇಂದ್ರಕ್ಕೆ ಹೇಳಿದೆ. ಈ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸುವುದಾಗಿ ಸರ್ಕಾರ ಹೇಳಿದೆ. ಇದೀಗ ಆಗಸ್ಟ್ 1 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಕಳವಳ ಉಂಟುಮಾಡಿದ ರೇಡಿಯೋ ಕಾಲರ್ – ಮತ್ತೊಂದು ಚೀತಾ ಕತ್ತಿನಲ್ಲಿ ತೀವ್ರ ಗಾಯಗಳು ಪತ್ತೆ
Advertisement
Advertisement
ನಮಿಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಒಟ್ಟು 20 ಚೀತಾಗಳನ್ನು ತರಲಾಗಿತ್ತು. ಕಳೆದ ನಾಲ್ಕು ತಿಂಗಳಲ್ಲಿ ಮೂರು ಮರಿಗಳು ಸೇರಿದಂತೆ ಒಟ್ಟು ಎಂಟು ಚೀತಾಗಳು ಸಾವನ್ನಪ್ಪಿವೆ. ಅವುಗಳಲ್ಲಿ ಎರಡು ಇತ್ತೀಚೆಗೆ ರೇಡಿಯೊ ಕಾಲರ್‌ಗಳಿಂದ ಉಂಟಾದ ಸೆಪ್ಟಿಸೆಮಿಯಾ ಎಂಬ ಚರ್ಮದ ಸೋಂಕಿನಿಂದ ಸಾವನ್ನಪ್ಪಿವೆ ಎನ್ನಲಾಗಿದೆ. ಇದು ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ನಿರ್ವಹಣೆ ಕುರಿತಂತೆ ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ಈಗ ಪ್ರಸ್ತುತ ಉದ್ಯಾನವನದಲ್ಲಿ 15 ಚೀತಾಗಳಿವೆ. 4 ಆವರಣದಲ್ಲಿ ಮತ್ತು 11 ಕಾಡಿನಲ್ಲಿವೆ. ಒಂದು ಮರಿ ತನ್ನ ತಾಯಿಯಿಂದ ತಿರಸ್ಕಾರಕ್ಕೊಳಗಾಗಿದ್ದು ಅದನ್ನು ಅರಣ್ಯಾಧಿಕಾರಿಗಳು ಆರೈಕೆ ಮಾಡುತ್ತಿದ್ದಾರೆ. ಇದನ್ನೂ ಓದಿ: 2 ಚೀತಾಗಳ ಸಾವಿಗೆ ಕಾರಣ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್!
Web Stories