– 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್
ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ (Police Constable) ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.
ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. ಮೂಲತಃ ಬೆಳಗಾವಿಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಕಳೆದ 7 ವರ್ಷದಿಂದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದನ್ನೂ ಓದಿ: ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಈರಣ್ಣ ಗುಡಾದಾರ್ 18 ದಿನಗಳ ಹಿಂದೆಯಷ್ಟೇ ಅದ್ದೂರಿ ವಿವಾಹವಾಗಿದ್ದ. ಕುಸಿದು ಬಿದ್ದ ಹಿನ್ನೆಲೆ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಈರಣ್ಣ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ದಿನೇಶ್ ಗುಂಡೂರಾವ್ ಸ್ಪಷ್ಟನೆ
