ಗದಗ: ಪಂಜಾಬ್‌ನ (Punjab) ಜಲಂಧರ್‌ನಲ್ಲಿ ಗದಗದ ಕರ್ತವ್ಯನಿರತ ಯೋಧರೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಜುನಾಥ ಗಿಡ್ಡಮಲ್ಲಣ್ಣವರ (31) ಮೃತ ಯೋಧ. ಗದಗ (Gadag) ತಾಲೂಕಿನ ಹಿರೇಕೊಪ್ಪ (Hirekoppa) ಗ್ರಾಮದ ಮಂಜುನಾಥ್ ಅವರು ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು
ಮೂರು ದಿನಗಳ ಹಿಂದೆ ಕರ್ತವ್ಯದ ವೇಳೆ ಮಂಜುನಾಥ್ ಅವರಿಗೆ ವಿದ್ಯುತ್ ಸ್ಪರ್ಶಿಸಿತ್ತು. ತಕ್ಷಣವೇ ಅವರನ್ನು ಎಎಸ್‌ಸಿ ಸೆಂಟರ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ
ಮಂಜುನಾಥ್ ಅವರು ಕುಟುಂಬ ಸಮೇತರಾಗಿ ಸೇನಾ ವಸತಿ ಗೃಹದಲ್ಲೇ ವಾಸವಾಗಿದ್ದರು. ಇದೀಗ ಮಂಜುನಾಥ್ ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಸ್ವಗ್ರಾಮ ಹಿರೇಕೊಪ್ಪನಲ್ಲೂ ನೀರವ ಮೌನ ಆವರಿಸಿದೆ. ಮಂಜುನಾಥ್ ಅವರ ಪಾರ್ಥಿವ ಶರೀರ ಬುಧವಾರ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.