ಧಾರವಾಡ: ಕರ್ತವ್ಯ ನಿರತ ಯೋಧ (Soldier) ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ (Jaipur) ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ಕೆಂಚರೆಡ್ಡಿನವರ್ (45) ಮೃತ ಯೋಧ. 18ನೇ ಇನ್ಫಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ ಅವರು ಸದ್ಯ ರಾಜಸ್ಥಾನದ ಬಾಡಮೆರ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತರೆಡ್ಡಿ ಅವರಿಗೆ ಬುಧವಾರ ಏಕಾಏಕಿ ಹೃದಯಾಘಾತವಾಗಿದೆ. ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಕೇಂದ್ರದ ಕಠಿಣ ಮಸೂದೆ: ಪ್ರಲ್ಹಾದ ಜೋಶಿ
ವೀರ ಯೋಧನ ಪಾರ್ಥಿವ ಶರೀರವು ಗುರುವಾರ ಸಂಜೆ 6 ಗಂಟೆಗೆ ಗರಗ ಗ್ರಾಮಕ್ಕೆ ಬರಲಿದೆ. ವಿಮಾನದ ಮೂಲಕ ಗೋವಾಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿಂದ ರಸ್ತೆ ಮೂಲಕ ಸ್ವಗ್ರಾಮಕ್ಕೆ ತರಲಾಗುತ್ತದೆ. ಶುಕ್ರವಾರ ಯೋಧನ ಅಂತ್ಯಕ್ರಿಯೆ ಭಾರತೀಯ ಸೇನೆಯ ರೀತಿ ನಿಯಮಗಳಂತೆ ನಡೆಯಲಿದೆ. ಇದನ್ನೂ ಓದಿ: ಕೇಸರಿ ಬಣ್ಣದಲ್ಲಿ ಹಾಕಿ ತಂಡ| ಇದು ದೇಶದ ಇತಿಹಾಸ ಬದಲಿಸುವ ಯತ್ನ: ಪ್ರಿಯಾಂಕಾ ಆಕ್ರೋಶ
