ನವದೆಹಲಿ: ಬೆಲೆ ಏರಿಕೆಯ ಬಿಸಿಯಲ್ಲಿ ಬೆಂದು ಹೋಗಿದ್ದ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಗಿಫ್ಟ್ ನೀಡಿದೆ.
ಮಹತ್ವದ ಚರ್ಚೆ ಬಳಿಕ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು, ದೀಪಾವಳಿಗೆ ಪ್ರಧಾನಿ ಭಾರೀ ಉಡುಗೊರೆ ನೀಡಿದಂತಾಗಿದೆ.
Advertisement
On eve of #Diwali, Government of India announces excise duty reduction on petrol and diesel. Excise duty on Petrol and Diesel to be reduced by Rs 5 and Rs 10 respectively from tomorrow pic.twitter.com/peYP1fA4gO
— ANI (@ANI) November 3, 2021
Advertisement
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಇದನ್ನೂ ಓದಿ: ನ.16ಕ್ಕೆ ಪ್ಯಾಲೇಸ್ ಗ್ರೌಂಡ್‍ನಲ್ಲಿ ಪವರ್ ಸ್ಟಾರ್‌ಗೆ ನುಡಿ ನಮನ
Advertisement
Advertisement
ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಮೋದಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.
The reduction in excise duty on diesel will be double that of petrol and will come as a boost to the farmers during the upcoming Rabi season. States urged to reduce VAT on petrol & diesel to give relief to consumers: Govt Sources
— ANI (@ANI) November 3, 2021
ರೈತರ ಮತ್ತು ಜನ ಸಾಮಾನ್ಯರ ಹಿತ ಕಾಯಲು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿದರೂ, ಮುಂಬರುವ ಪಂಚರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಪ್ರಧಾನಿ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ
ಅದೇನೆ ಇದ್ದರೂ ಸದ್ಯ ಬೆಲೆ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಐದು ರೂಪಾಯಿ ಡೀಸೆಲ್ ಬೆಲೆಯಲ್ಲಿ ಹತ್ತು ರೂಪಾಯಿ ಕಡಿಮೆಗೆ ಲಭ್ಯವಾಗಲಿದ್ದು ಜನರು ಒಂದಷ್ಟು ನಿರಾಳವಾಗಬಹುದಾಗಿದ್ದು, ಹಬ್ಬದ ಖುಷಿಯನ್ನು ದುಪ್ಪಟ್ಟು ಮಾಡಿದೆ.
In recent months, crude oil prices have witnessed a global upsurge. Consequently, domestic prices of petrol & diesel had increased in recent weeks exerting inflationary pressure. The world has also seen shortages and increased prices of all forms of energy: Ministry of Finance
— ANI (@ANI) November 3, 2021