ರಿಯಲ್ ಸ್ಟಾರ್ ಉಪೇಂದ್ರ (Upendra) ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ (Sudeep) ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ (Kabzaa) ಸಿನಿಮಾದ ಕಮರ್ಷಿಯಲ್ ಹಾಡೊಂದನ್ನು ಬಿಡುಗಡೆ ಮಾಡಲು ಅದ್ಧೂರಿಯಾಗಿ ತಯಾರಿ ಮಾಡಿಕೊಂಡಿದ್ದಾರೆ ನಿರ್ದೇಶಕ ಆರ್. ಚಂದ್ರು (R. Chandru). ಇದೇ ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ (Shidlaghatta) ಹಾಡು ಬಿಡುಗಡೆಯಾಗಲಿದೆ.
ಈ ಕುರಿತು ಮಾತನಾಡಿರುವ ನಿರ್ದೇಶಕ ಚಂದ್ರು, ‘ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಶಿಡ್ಲಘಟ್ಟ ನನ್ನ ತವರೂರು. ನಮ್ಮೂರಿನಲ್ಲಿ ಕಬ್ಜ ಚಿತ್ರದ ಅದ್ದೂರಿ ಸಮಾರಂಭ ಆಯೋಜಿಸಿರುವೆ. ಸಮಾರಂಭ ಯಶಸ್ವಿಯಾಗಿ ನಡೆಯಲು ಈಗಾಗಲೇ ತಯಾರಿ ಆರಂಭಿಸಿದ್ದೇನೆ’ ಎಂದಿದ್ದಾರೆ. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ
ಈ ಸಮಾರಂಭದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಪ್ರೇಮ್, ಶ್ರೀಯಾ ಶರಣ್ ಹಾಗೂ ಆಂಧ್ರ, ತಮಿಳುನಾಡು, ಕೇರಳದಿಂದ ಸಹ ಪ್ರಮುಖ ಗಣ್ಯರು ಆಗಮಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಸಮಾರಂಭವನ್ನಾಗಿಸಲು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದೆ ಚಿತ್ರತಂಡ.
ಕಬ್ಜ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಚೆನ್ನೈ, ಹೈದರಾಬಾದ್, ಮುಂಬೈ, ಕೇರಳ ಹೀಗೆ ಹಲವು ಕಡೆಗಳಲ್ಲಿ ಸಮಾರಂಭಗಳನ್ನು ಮಾಡುವ ಕುರಿತು ಚಿತ್ರತಂಡ ಯೋಜನೆ ಹಾಕಿದೆ. ಈಗಾಗಲೇ ಚೆನ್ನೈ, ಹೈದರಾಬಾದ್ ನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Can you be more specific about the content of your article? After reading it, I still have some doubts. Hope you can help me. https://www.binance.com/join?ref=P9L9FQKY