ನವದೆಹಲಿ: ಇಂಡೋ-ಇಸ್ರೇಲ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 30ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.
Advertisement
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ 2022ರ ಏಪ್ರಿಲ್ 2ರಂದು ಭಾರತಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ನಫ್ತಾಲಿ ಬೆನೆಟ್ ಅವರು ವಿದೇಶಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ಪ್ರಮುಖ ಸಂಪರ್ಕವನ್ನು ಪುನರುಚ್ಚರಿಸುತ್ತದೆ ಮತ್ತು ಇಸ್ರೇಲ್ ಮತ್ತು ಭಾರತದ ನಡುವಿನ ಸಂಬಂಧಗಳ ಸ್ಥಾಪನೆಯ 30 ನೇ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ
Advertisement
Prime Minister Naftali Bennett will pay his first official visit to India on Saturday, 2 April 2022, at the invitation of Indian Prime Minister Narendra Modi: Office of the Prime Minister of Israel
(Photo source: Israel PMO) pic.twitter.com/uCkfvyl3a6
— ANI (@ANI) March 20, 2022
Advertisement
ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಮೈತ್ರಿಯನ್ನು ಮುನ್ನಡೆಸುವುದು. ಬಲಪಡಿಸುವುದು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ವಿಸ್ತರಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ ಎಂದಿದ್ದಾರೆ. ಬೆನೆಟ್ ಮತ್ತು ಮೋದಿ ಅವರು ನಾವೀನ್ಯತೆ, ಆರ್ಥಿಕತೆ, ಸಂಶೋಧನೆ ಮತ್ತು ಅಭಿವೃದ್ಧಿ, ಕೃಷಿ ಮತ್ತು ಹೆಚ್ಚಿನವು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚಿಸಲಿದ್ದಾರೆ. ಇದನ್ನೂ ಓದಿ: ಕುಲಪತಿಗಳ ಸರ್ಕಾರಿ ಬಂಗಲೆಗೆ ಬೇಕಾಬಿಟ್ಟಿ ಖರ್ಚು – ಕುಲಪತಿ ಮೇಲೆ ಗಂಭೀರ ಆರೋಪ