ಬೆಂಗಳೂರು: ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಜೂನ್ 17ರಂದು ನೇರಳೆ ಮಾರ್ಗದ ಮೆಟ್ರೋ (Metro Purple Line) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.
ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆ ಅಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ. ಇದನ್ನೂ ಓದಿ: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಸೂಚನೆ
ಮಧ್ಯಾಹ್ನ 1 ಗಂಟೆ ನಂತರ ಚಲ್ಲಘಟ್ಟ ದಿಂದ ವೈಟ್ ಫೀಲ್ಡ್ ನಡುವೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ