ಜವಾಹರಲಾಲ್ ನೆಹರೂ ಪುಣ್ಯ ತಿಥಿ – ಸೋನಿಯಾ ಗಾಂಧಿಯಿಂದ ಪುಷ್ಪ ನಮನ

Public TV
2 Min Read
neharu death anniversary

ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 58ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಇತರ ಪಕ್ಷದ ನಾಯಕರು ಸೇರಿದಂತೆ ಅನೇಕರು ಇಂದು ನಮನ ಸಲ್ಲಿಸಿದರು.

ನಗರದ ಅವರ ಶಾಂತಿ ವನ ಸ್ಮಾರಕಕ್ಕೆ ಭೇಟಿ ನೀಡಿದ ಸೋನಿಯಾ ಗಾಂಧಿ ಅವರು ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

ಜವಾಹರಲಾಲ್ ನೆಹರು ಅವರು 1964ರ ಮೇ 27 ರಂದು ಕೊನೆಯುಸಿರೆಳೆದರು. ದೇಶಾದ್ಯಂತ ಸುಮಾರು 1.5 ಮಿಲಿಯನ್ ಜನರು ಅವರ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಅವರನ್ನು ಸ್ಮರಿಸಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

‘ಚಾಚಾ ನೆಹರು’ ಎಂದು ಪ್ರೀತಿಯಿಂದ ಕರೆಯಲ್ಪಡುವ ಜವಾಹರಲಾಲ್ ನೆಹರು ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನವೆಂಬರ್ 14, 1889 ರಂದು ಜನಿಸಿದ್ದರು. ನೆಹರು ಅವರು ಆಗಸ್ಟ್ 15, 1947 ರಂದು ಭಾರತದ ಪ್ರಧಾನ ಮಂತ್ರಿಯಾಗಿ 18 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

neharu

ಜವಾಹರಲಾಲ್ ನೆಹರೂ ಅವರು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಹಗಾರರಾಗಿದ್ದ ಅವರು,  ‘ದಿ ಡಿಸ್ಕವರಿ ಆಫ್ ಇಂಡಿಯಾ’, ‘ಗ್ಲಿಂಪ್ಸಸ್ ಆಫ್ ವಲ್ರ್ಡ್ ಹಿಸ್ಟರಿ’ ಮತ್ತು ಅವರ ಆತ್ಮಚರಿತ್ರೆ ‘ಟುವರ್ಡ್ ಫ್ರೀಡಮ್’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

1950 ರಿಂದ 1955 ರವರೆಗೆ ಭಾರತದಲ್ಲಿ ಶಾಂತಿಯನ್ನು ಎತ್ತಿ ಹಿಡಿದಿದ್ದಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಗೆ 11 ನಾಮನಿರ್ದೇಶನಗಳನ್ನು ಗೆದ್ದಿದ್ದಾರೆ. ಅಷ್ಟೇ ಅಲ್ಲದೇ ಅವರಿಗೆ 1955 ರಲ್ಲಿ ಭಾರತ ರತ್ನವನ್ನು ಸಹ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *