ನ.11ರಂದು ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ – ಆದಿಚುಂಚನಗಿರಿ ಶ್ರೀಗಳ ಜತೆ ಸಚಿವರ ಸಮಾಲೋಚನೆ

Public TV
2 Min Read
mnd nirmalanandanatha swamiji

ಬೆಂಗಳೂರು: ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ರೂಪುರೇಷೆ ಕುರಿತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉನ್ನತ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

NARENDRA MODI 6

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ಶ್ರೀಗಳನ್ನು ಭೇಟಿ ಮಾಡಿದ ಸಚಿವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಚಿಂತನೆ ಮತ್ತು ಆಶಯಗಳನ್ನು ಹಂಚಿಕೊಂಡರು. ಶ್ರೀಗಳ ಜೊತೆ ಸುಮಾರು ಎರಡು ತಾಸು ವಿಚಾರ ವಿನಿಮಯ ನಡೆಸಿದ ಸಚಿವರು, ಕಾರ್ಯಕ್ರಮದ ಯಶಸ್ಸಿಗೆ ಮಾರ್ಗದರ್ಶನ ಕೋರಿದರು. ಅಲ್ಲದೇ, ಕಾರ್ಯಕ್ರಮಕ್ಕೆ ಜನರನ್ನು ಸಮಾಗಮಗೊಳಿಸುವ ಕುರಿತು ಚರ್ಚಿಸಿದರು. ಇದನ್ನೂ ಓದಿ: ದರೋಡೆಗೆ ಬಂದವನಿಗೆ ಕಟ್ಟಿಂಗ್ ಪ್ಲೆಯರ್ ತೋರಿಸಿ ಓಡಿಸಿದ ಲೇಡಿ ಬ್ಯಾಂಕ್ ಮ್ಯಾನೇಜರ್

BASVARAJ BOMMAI

ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀಗಳು, ಕಾರ್ಯಕ್ರಮದ ಯಶಸ್ಸಿಗೆ ಮಠ ಮತ್ತು ಸಮಾಜದ ವತಿಯಿಂದ ಸಕಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮೊದಲು ಸಚಿವರು 20ಕ್ಕೂ ಹೆಚ್ಚು ಪ್ರಮುಖ ಒಕ್ಕಲಿಗ ಸಂಘಟನೆಗಳ ಪ್ರಮುಖರ ಜೊತೆಯೂ ಕಾರ್ಯಕ್ರಮ ಕುರಿತು ಸಭೆ ನಡೆಸಿದರು. ಇದನ್ನೂ ಓದಿ: 3ರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಗೆ 20 ವರ್ಷ ಜೈಲು, 1 ಲಕ್ಷ ದಂಡ

21ರಂದು ರಥಗಳಿಗೆ ಚಾಲನೆ
ನ.11ರ ಕಾರ್ಯಕ್ರಮದ ಅಂಗವಾಗಿ ನಾಡಿನೆಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ ವಿಶೇಷ ರಥಗಳಿಗೆ ಅ.21ರಂದು ವಿಧಾನಸೌಧದ ಮುಂಭಾಗದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಬೇಕು. ಇದರಲ್ಲಿ ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಂಡು, ಸಾಮೂಹಿಕ ಸಂಭ್ರಮದಂತೆ ಆಚರಿಸಬೇಕು ಎಂದು ಅಶ್ವತ್ಥನಾರಾಯಣ ಅವರು ಹೇಳಿದರು.

ಅಭಿಯಾನ ಯಶಸ್ಸಿಗೆ ಸಿಎಂ ಸೂಚನೆ
ಇದಕ್ಕೂ ಮೊದಲು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಲೋಕಾರ್ಪಣೆ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *