Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಕೆಶಿ

Bengaluru City

ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಕೆಶಿ

Public TV
Last updated: November 29, 2025 3:30 pm
Public TV
Share
4 Min Read
DK Shivakumar 11
SHARE

ಬೆಂಗಳೂರು: ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ (ನ.29) ಉಪಾಹಾರ ಸಭೆ ನಡೆಸಿದ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ಕೃಷ್ಣ ಅವರ ಕಾಲದಲ್ಲೂ ಗುಂಪುಗಾರಿಕೆ ಮಾಡಿಲ್ಲ. ಇವತ್ತಿಗೂ ಅವಕಾಶ ಕೊಟ್ಟಿಲ್ಲ. ನನಗೆ ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೊದಲ ಆರು ತಿಂಗಳು ನನ್ನನ್ನು ಮಂತ್ರಿ ಮಾಡದೇ ಇದ್ದಾಗಲೂ ನಾನು ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಒಟ್ಟಾಗಿ ಕೆಲಸ ಮಾಡುವ ನನ್ನ ನಿರ್ಧಾರ ಅಚಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು, ಪ್ರತಿಯೊಬ್ಬ ಶಾಸಕರಿಗೆ ಶಕ್ತಿ ತುಂಬಿ, ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದು ನಮ್ಮಿಬ್ಬರ ಕರ್ತವ್ಯ. 2028ಕ್ಕೆ ಮತ್ತೆ ಕಾಂಗ್ರೆಸ್ (Congress) ಸರ್ಕಾರವನ್ನು ಅಧಿಕಾರಕ್ಕೆ ತರಲು ಅನೇಕ ಕಾರ್ಯಕ್ರಮ ರೂಪಿಸಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ನೀಡಿರುವ ಸಂದೇಶಕ್ಕೆ ನನ್ನ ಸಹಮತವಿದೆ ಎಂದರು.ಇದನ್ನೂ ಓದಿ: ನಮ್ಮದು ಒಂದೇ ಗುಂಪು, ಕಾಂಗ್ರೆಸ್‌ ಗುಂಪು – ಡಿಕೆ ಶಿವಕುಮಾರ್‌

ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಪಕ್ಷ ಕಷ್ಟದ ಸಮಯದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಹತ್ತರ ಪಾತ್ರ ನಿರ್ವಹಿಸಲಿದೆ. 2028ರ ಚುನಾವಣೆ ನಂತರ 2029ರ ಲೋಕಸಭೆ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ 2028ಕ್ಕೆ ಹಾಗೂ 2029ರಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು, ಮುಂದೆಯೂ ಅದೇ ರೀತಿ ಕೆಲಸ ಮಾಡಲು ಅಚಲ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಇಂದು ನಾನು ಹಾಗೂ ಸಿಎಂ ಅವರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಭೋಜನಕೂಟಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರ ಪರಿಶ್ರಮ, ಜನರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತಿನಂತೆ ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡುತ್ತಿದ್ದಾರೆ. ಜನರ ನಿರೀಕ್ಷೆ, ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ನಮ್ಮ ನಡುವೆ ಭಿನ್ನ ಇಲ್ಲ, ಹೈಕಮಾಂಡ್‌ ಹೇಳಿದಂತೆ ಕೇಳ್ತೇವೆ; ಸಿಎಂ – ಡಿಸಿಎಂ ಒಗ್ಗಟಿನ ಸಂದೇಶ

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರದ ಚರ್ಚೆ:
ಡಿ.8ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದಕ್ಕೆ ನಮ್ಮದೇ ಆದ ಸ್ವರೂಪ ನೀಡುತ್ತೇವೆ. ಅವರು ಸದನದಲ್ಲಿ ಏನೇ ಪ್ರಶ್ನೆ ಕೇಳಿದರೂ ಅದಕ್ಕೆ ಉತ್ತರಿಸಲು ನಾವು ಸಮರ್ಥರಿದ್ದೇವೆ ಎಂದರು.

ದೆಹಲಿಗೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ, ಪಕ್ಷದ ವರಿಷ್ಠರು ನಮ್ಮನ್ನು ಕರೆದರೆ, ನಾವು ಖಂಡಿತವಾಗಿಯೂ ಹೋಗುತ್ತೇವೆ. ಅದರ ಹೊರತಾಗಿ ಮೆಕ್ಕೆಜೋಳ, ಕಬ್ಬು ದರ ನಿಗದಿ ಹಾಗೂ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಸಂಸದರು ಧ್ವನಿ ಎತ್ತಬೇಕಿದೆ. ಈ ವಿಚಾರವಾಗಿ ಸಂಸದರ ಜೊತೆ ನಾವು ಚರ್ಚೆ ಮಾಡಬೇಕಿದೆ. ಮೆಕ್ಕೆಜೋಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಸಹಕಾರ ನೀಡುತ್ತಿಲ್ಲ. ಈ ವಿಚಾರಗಳಲ್ಲಿ ಕೇಂದ್ರದ ನೆರವು ಪಡೆಯುವುದು ರಾಜ್ಯದ ಹಕ್ಕು. ಇತ್ತೀಚಿಗೆ ಸಿಎಂ ಅವರು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸಂಸದರ ಜೊತೆ ಚರ್ಚೆ ಮಾಡಿ, ಕೇಂದ್ರದ ಮೇಲೆ ಒತ್ತಡ ಹಾಕುವಂತೆ ತಿಳಿಸುತ್ತೇವೆ. ನಾವೆಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಪಾಡಬೇಕಿದೆ. ಕೇಂದ್ರ ಸಚಿವರು ನಿಯೋಗದಲ್ಲಿ ನೀವು ಬನ್ನಿ ಎಂದು ತಿಳಿಸಿದ್ದು, ನಾವು ಹೋಗುತ್ತೇವೆ. ಮೇಕೆದಾಟು ಯೋಜನೆ ವಿಚಾರದಲ್ಲಿ ನ್ಯಾಯಾಲಯದಿಂದ ರಾಜ್ಯದ ಪರವಾದ ತೀರ್ಪು ಬಂದಿದೆ. ಈಗ ಚೆಂಡು ಕೇಂದ್ರ ಸರ್ಕಾರದ ಜಲ ಆಯೋಗದ ಅಂಗಳದಲ್ಲಿದೆ. ನಾವು ಇದಕ್ಕೆ ಪರಿಷ್ಕೃತ ಡಿಪಿಆರ್ ಸಲ್ಲಿಸುತ್ತೇವೆ. ಇದರ ಜೊತೆಗೆ ಇತರೆ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡಬೇಕು. ದೇಶದಲ್ಲಿ ಕರ್ನಾಟಕ ಪ್ರಮುಖ ರಾಜ್ಯವಾಗಿದ್ದು, ಇಡೀ ವಿಶ್ವ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರು ಮೂಲಕ ನೋಡುತ್ತಿದೆ. ಇನ್ನು ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಅವರು ಏನಾದರೂ ಮಾಡಲಿ, ವಿರೋಧ ಪಕ್ಷವಾಗಿ ಅವರಿಗೆ ಆ ಹಕ್ಕಿದೆ. ಆಡಳಿತ ಪಕ್ಷವಾಗಿ ಅದನ್ನು ಎದುರಿಸಲು ನಾವು ಸಮರ್ಥರಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ

TAGGED:bengalurubjpcongressDK Shivakumarsiddaramaiahಕಾಂಗ್ರೆಸ್ಕಾಂಗ್ರೆಸ್ ಹೈಕಮಾಂಡ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Narendra Modi Donald Trump
Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
By Public TV
5 hours ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
6 hours ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
6 hours ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
7 hours ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
7 hours ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?