ಕನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಈ ಬಾರಿಯ ಪ್ರೇಮಿಗಳ ಹಬ್ಬವನ್ನು (Valentine’s Day) ಆಚರಿಸಲು ಬೆಂಗಳೂರು ತೊರೆದಿದ್ದಾರೆ. ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಸಾಕ್ಷಿಯಾಗಿದ್ದಾರೆ. ಸ್ವತಃ ಸಾಹಿತ್ಯ ಪ್ರೇಮಿಯೂ ಆಗಿರುವ ವಸಿಷ್ಠ ಪ್ರೇಮಿಗಳ ದಿನದಂದು ಖ್ಯಾತ ಲೇಖಕ ಶಿವಕುಮಾರ ಮಾವಲಿ (Shivakumar Mavali) ಬರೆದ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು (Book) ಪತ್ನಿ ಹರಿಪ್ರಿಯಾ ಜೊತೆಯಾಗಿ ಬಿಡುಗಡೆ ಮಾಡಿದ್ದಾರೆ.
Advertisement
ವರ್ಷಗಳ ಕಾಲ ಪ್ರೇಮಿಗಳಾಗಿದ್ದು ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನೂ ಅವರು ಮೆಲುಕು ಹಾಕಿದ್ದಾರೆ.
Advertisement
Advertisement
ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು, ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಎಂಬ ವಿಶಿಷ್ಟ ಶೀರ್ಷಿಕೆಯನ್ನು ಹೊಂದಿದೆ. ಅಲ್ಲದೇ, ಇದೊಂದು ಕಥಾ ಸಂಕಲನವಾಗಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ , ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡಿದ್ದಾರೆ. ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು.
Advertisement
ಹರಿಪ್ರಿಯ, ”ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ” ಎಂದು ಹೇಳಿದರೆ, ವಸಿಷ್ಠ ಸಿಂಹ , ” ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ ” ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಇಂದ ಪ್ರಕಟವಾಗುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.
‘ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು’ ಎಂದು ಹರಿಪ್ರಿಯ ಹೇಳಿದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ
‘ದೇವರು ಅರೆಸ್ಟ್ ಆದ’ ಮತ್ತು ‘ಟೈಪಿಸ್ಟ್ ತಿರಸ್ಕರಿಸಿದ ಕತೆ’ ಎಂಬ ಕತಾ ಸಂಕಲನಗಳ ಮೂಲಕ ಹೊಸ ರೀತಿಯ ಕತೆಗಳನ್ನು ಪರಿಚಯಿಸಿದ ಶಿವಕುಮಾರ ಮಾವಲಿಯವರ ‘ಸುಪಾರಿ ಕೊಲೆ’ ನಾಟಕ ಒಂದು ಪತ್ತೇದಾರಿ ಮಾದರಿಯ ನಾಟಕವಾಗಿದ್ದರೆ, ಇತ್ತೀಚಿಗೆ ಪ್ರದರ್ಶನಗೊಂಡ ಅವರ ‘ಒಂದು ಕಾನೂನಾತ್ಮಕ ಕೊಲೆ’ ನಾಟಕವು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಬಳಸಿಕೊಂಡು ಸಶಕ್ತವಾಗಿ ರಾಜಕೀಯ ವಿಡಂಬನೆ ಮಾಡುವ ನಾಟಕವಾಗಿದೆ. ಹಾಗೆಯೇ ರಾಜೀವ್ ಗಾಂಧಿ ಹತ್ಯೆಯ ಸಮಯದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಬದುಕಲ್ಲಿ ನಡದ ಘಟನೆಯಾಧಾರಿತ ಕಾದಂಬರಿ ‘LTTE Murthy Calling’ ಇತ್ತೀಚಿಗಷ್ಟೆ ತಮಿಳಿಗೆ ಅನುವಾದಗೊಂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k