ಬೆಂಗಳೂರು: ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಅಧಿಕಾರಕ್ಕೆ ಬರಲ್ಲ ಎನ್ನುವ ಮಾತು ಇದೀಗ ಮತ್ತೊಮ್ಮೆ ನಿಜವಾಗಿದೆ.
ಹೌದು. ಇತ್ತೀಚಿನ ಕೆಲ ವರ್ಷಗಳಲ್ಲಿ ಕೇಂದ್ರದಲ್ಲಿ ಒಂದು ಪಕ್ಷ ಅಧಿಕಾರವಿದ್ದರೆ ರಾಜ್ಯದಲ್ಲಿ ಇನ್ನೊಂದು ಪಕ್ಷ ಅಧಿಕಾರ ಹಿಡಿಯುತ್ತಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಅಸ್ತಿತ್ವಕ್ಕೆ ಬರಲ್ಲ ಎಂಬುದು ಇದೀಗ ಈ ವರ್ಷದ ಚುನಾವಣೆಯಲ್ಲಿ ಮತ್ತೊಮ್ಮೆ ನಿಜವಾಯಿತು.
Advertisement
ಚುನಾವಣಾ ಫಲಿತಾಂಶಕ್ಕೂ ಮೊದಲೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಹೆಚ್ಚು ಸ್ಥಾನವನ್ನು ಗೆದ್ದುಕೊಂಡರೂ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದ ಸಾಧ್ಯವಾಗಿಲ್ಲ. ಆದ್ರೂ ರಾಜ್ಯಪಾಲರ ಅನುಮತಿಯಂತೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದೇ ಬಿಟ್ಟರು. ಒಂದು ವೇಳೆ ಬಹುಮತ ಸಾಬೀತು ಪಡಿಸಿ ಸರ್ಕಾರ ರಚಿಸುತ್ತಿದ್ದರೆ ಕೇಂದ್ರದಲ್ಲಿ ಬಿಜೆಪಿ ಹಾಗೂ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ಇತಿಹಾಸ ನಿರ್ಮಾಣವಾಗತಿತ್ತು.
Advertisement
Advertisement
ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಪರಿಣಾಮ ವಿಶ್ವಾಸ ಮತಯಾಚನೆ ಮಾಡದೇ ಮೂರೇ ದಿನಕ್ಕೆ ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿದ್ರು. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯಾಡಳಿತ ಮಾಡಲಿವೆ.
Advertisement
ಒಟ್ಟಿನಲ್ಲಿ ಇದೀಗ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರವಾಗಿ ಅಧಿಕಾರ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದಿವೆ.
ಈ ಹಿಂದೆ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರದ ಆಡಳಿತವಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲೂ ಯುಪಿಎ ಆಡಳಿತವಿತ್ತು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನಡೆದ 2014ರ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿತ್ತು.