ಚಿಕ್ಕಬಳ್ಳಾಪುರ: ಕಾಂಗ್ರೆಸ್ (Congress) ಪಕ್ಷದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆಯಿಂದ ನಮಗೆ ಯಾವುದೇ ರೀತಿಯ ತೊಂದರೆ ಇಲ್ಲ. ಬದಲಿಗೆ ಇನ್ನೂ ಧೈರ್ಯ ಬಂದಿದೆ. ರಾಜ್ಯದ ಜನರ ನಾಡಿಮಿಡಿತವನ್ನು ಅರಿತಿದ್ದೇವೆ. ಮುಂಬರುವ 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ರಾಜ್ಯ ಪೌರಾಡಳಿತ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ವಿಶ್ವಾಸ ವ್ಯಕ್ತಪಡಿಸಿದರು.
Advertisement
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆ (Bharat Jodo Yatre) ಯಿಂದ ಬಿಜೆಪಿ (BJP) ಪಕ್ಷಕ್ಕೆ ಯಾವುದೇ ಭಯವಿಲ್ಲ, ಬದಲಿಗೆ ಧೈರ್ಯ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ಜನರ ಮುಂದಿಟ್ಟುಕೊಂಡು 2023ರ ಚುನಾವಣೆ ಎದುರಿಸಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರವನ್ನು ನಡೆಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ರಾಜ್ಯದಲ್ಲಿ ಸುಮಾರು ವರ್ಷಗಳ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ತೆಗೆದು ಕೊಂಡಿದ್ದೇವೆ. ಆದಷ್ಟು ಬೇಗ ವರದಿಯನ್ನು ಕೇಂದ್ರ ಸರ್ಕಾರ (Central Government)ಕ್ಕೆ ಸಲ್ಲಿಸಿ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ಒಳ ಮೀಸಲಾತಿ ವಿಚಾರದಲ್ಲೂ ಸಹ ಗಂಭೀರವಾಗಿ ಚರ್ಚೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
Advertisement
ಎಸ್‍ಸಿ (SC), ಎಸ್ ಟಿ (ST) ಸೇರಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಬೇಡಿಕೆ ಹೆಚ್ಚಾಗಿದೆ. ವಿಶೇಷವಾಗಿ ಕುರುಬ ಸಮುದಾಯದವರಿಗೆ ಮೀಸಲಾತಿ ನೀಡಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಅವರಿಗೂ ಸಹ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಆಧಾರ್ ಪಡೆದು 10 ವರ್ಷ ಆಯ್ತಾ? – ಮಾಹಿತಿ ನವೀಕರಣಕ್ಕೆ ಯುಐಡಿಎಐ ಮನವಿ
70 ವರ್ಷದ ರಾಜಕಾರಣಿಗಳಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿದರೆ ತಮ್ಮ ಪುತ್ರನಿಗೆ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮನವಿ ಮಾಡುತ್ತೇನೆ, ಹೊರತು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಪಕ್ಷಾಂತರ ಮಾಡುವ ಜಾಯಮಾನ ನನ್ನದಲ್ಲ. 39 ವರ್ಷದಿಂದ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದೇನೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂಬುದು ಶುದ್ಧ ಸುಳ್ಳು. ಬಿಜೆಪಿಯಲ್ಲಿದ್ದೇನೆ ಮುಂದೆಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.