ಮಂಗಳೂರು: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದರು.
Advertisement
ಮಂಗಳೂರಿನಲ್ಲಿ ಹಿಜಬ್ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಖಾದರ್ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ಅಡ್ಯಾರ್‌ಗೆ ಹೋಗಿ ಕ್ರಿಕೆಟ್ ಆಡ್ತಿದ್ದಾರೆ- ಹಿಜಬ್ ವಿದ್ಯಾರ್ಥಿನಿ ಅಸಮಾಧಾನ
Advertisement
Advertisement
ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನು ಭೇಟಿಯಾಗೋದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ ಎಂದು ಕಿಡಿಕಾರಿದರು.