ವಿನಯ್ ರಾಜ್‌ಕುಮಾರ್, ಸ್ವಾತಿಷ್ಠ ಕೃಷ್ಣನ್ ನಟನೆಯ ಚಿತ್ರಕ್ಕೆ ವಿಜಯ್ ಸೇತುಪತಿ ಸಾಥ್

Public TV
1 Min Read
swathishta

ಸಿಂಪಲ್ ಸುನಿ- ವಿನಯ್ ರಾಜ್ ಕುಮಾರ್ (Vinay Rajkumar) ಸಂಗಮದ ‘ಒಂದು ಸರಳ ಪ್ರೇಮಕಥೆ’ (Ondu Sarala Prema Kathe) ಸಿನಿಮಾ ಸದ್ಯದಲ್ಲೇ ತೆರೆ ಕಾಣಲಿದೆ. ಇದೀಗ ನಾಯಕಿ ಸ್ವಾತಿಷ್ಠ ಕೃಷ್ಣನ್ (Swathishta Krishnan) ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಲಾಗಿದೆ. ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ (Vijay Sethupathi) ಕ್ಯಾರೆಕ್ಟರ್ ಟೀಸರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

vinay rajkumar

ಸ್ವಾತಿಷ್ಠ ಕೃಷ್ಣನ್ ಅನುರಾಗ ಎಂಬ ಪತ್ರಕರ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಯಾವುದಕ್ಕೂ ಜಗ್ಗದೇ ಧೈರ್ಯವಾಗಿ ಮುನ್ನುಗ್ಗುವ ಜರ್ನಲಿಸ್ಟ್ ಆಗಿ ನಟಿಸಿದ್ದಾರೆ. ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಸೇರಿದಂತೆ ಒಂದಷ್ಟು ತಮಿಳು ಸಿನಿಮಾದಲ್ಲಿ ನಟಿಸಿರುವ ಸ್ವಾತಿಷ್ಠಗೆ ‘ಒಂದು ಸರಳ ಪ್ರೇಮಕಥೆ’ ಚೊಚ್ಚಲ ಕನ್ನಡ ಸಿನಿಮಾವಾಗಿದೆ. ಇದನ್ನೂ ಓದಿ:ರಾಮ ಮಂದಿರ ಉದ್ಘಾಟನೆ ದಿನ ‘ಶ್ರೀ ರಾಮ್, ಜೈ ಹನುಮಾನ್’ ಪೋಸ್ಟರ್ ರಿಲೀಸ್

vijay sethupathi 3

ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್‌ಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ನಾಯಕಿಯರಾಗಿ ನಟಿಸಿದ್ದಾರೆ.

ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ಅಂದಹಾಗೆ, ಈ ಸಿನಿಮಾಗೆ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

Share This Article