BelgaumDistrictsKarnatakaLatestMain Post

ಸಿದ್ದರಾಮಯ್ಯ ಅಭಿಮಾನಿಯಿಂದ ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿ ಗಿಫ್ಟ್!

Advertisements

ಬೆಳಗಾವಿ: ಬುಧವಾರ ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿಯನ್ನು ಸಿದ್ಧಪಡಿಸಿ ಗಿಫ್ಟ್ ನೀಡಲು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸಂಸುದ್ದಿ ಎಂಬುವವರು ಒಂದೂವರೆ ಕೆಜಿ ತೂಕದ ಬೆಳ್ಳಿ ಮೂರ್ತಿಯನ್ನು ಸಿದ್ದರಾಮಯ್ಯನವರಿಗೆ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಹೌದು, ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಆಯೋಜನೆಗೊಂಡಿರುವ ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಇದನ್ನೂ ಓದಿ: ಹಾಡಹಗಲೇ ಮಾರಕಾಸ್ತ್ರಗಳಿಂದ ರೇಷ್ಮೆ ವ್ಯಾಪಾರಿ ಮೇಲೆ ಅಟ್ಯಾಕ್ – ಹೆಬ್ಬೆರಳು ಕಟ್

ಹೀಗಾಗಿ ಅವರ ಅಭಿಮಾನಿ, ಕಾಂಗ್ರೆಸ್ ಮುಖಂಡ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಭಾವಚಿತ್ರವುಳ್ಳ ಒಂದೂವರೆ ಕೆಜಿ ಬೆಳ್ಳಿ ಮೂರ್ತಿಯನ್ನು ಸಿದ್ಧಪಡಿಸಿ ಅವರಿಗೆ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಸಿದ್ದರಾಮಯ್ಯನವರ ಬೆಳ್ಳಿ ಮೂರ್ತಿಯನ್ನ ಮಹಾರಾಷ್ಟ್ರದಲ್ಲಿ ನಿರ್ಮಿಸಲಾಗಿದ್ದು ಸಿದ್ದರಾಮಯ್ಯ ಮೂರ್ತಿಯನ್ನು ತಯಾರಿಸಿಸಲು ಒಂದು ವಾರ ತೆಗೆದುಕೊಂಡಿದ್ದಾರೆ.

Live Tv

Leave a Reply

Your email address will not be published.

Back to top button