ಕನ್ನಡದ ಕಾಟೇರ (Katera) ಸಿನಿಮಾ ಕಳೆದ ವಾರದಿಂದ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿತ್ತು. ಸಿನಿಮಾ ರಿಲೀಸ್ ಆಗಿ ಕೆಲವೇ ಗಂಟೆಗಳಲ್ಲೇ ಚಿತ್ರದ ಪೈರಸಿ ಹೊರ ಬಂದಿತ್ತು. ಪೈರಸಿ ಲಿಂಕ್ ಗಳನ್ನು ಸಾಕಷ್ಟು ಜನರು ಹಂಚಿಕೊಂಡಿದ್ದರು. ಈ ಕುರಿತಂತೆ ಚಿತ್ರತಂಡವು ಪೈರಸಿ (Piracy) ಮಾಡುವವರು ವಿರುದ್ಧ ಕ್ರಮಕ್ಕೆ ಮುಂದಾಗಿತ್ತು. ಪೈರಸಿ ಮಾಡುವವರ ವಿರುದ್ಧ ಸ್ವತಃ ದರ್ಶನ್ (Darshan) ಗುಡುಗಿದ್ದರು.
Advertisement
ಪೈರಸಿ ಲಿಂಕ್ ಗಳು ಹೆಚ್ಚೆಚ್ಚು ಶೇರ್ ಆಗುತ್ತಿದ್ದಂತೆಯೇ ಅದನ್ನು ಮಾಡುವವರ ಹುಡುಕಾಟಕ್ಕೆ ಚಿತ್ರತಂಡ ಮುಂದಾಗಿತ್ತು. ಕೊನೆಗೂ ಪೈರಸಿ ಮಾಡಿ, ಆ ಲಿಂಕ್ ಅನ್ನು ನಲವತ್ತು ರೂಪಾಯಿಗೆ ಮಾರುತ್ತಿದ್ದ ರಾಯಚೂರಿ ಜಿಲ್ಲೆಯ, ದೇವದುರ್ಗ ತಾಲೂಕಿನ ಗಂಗನಾಯಕ್ ತಾಂಡದ ಮೌನೇಶ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಕುರಿತಂತೆ ದರ್ಶನ್ ಅಭಿಮಾನಿಗಳು ಪೋಸ್ಟ್ ಮಾಡಿದ್ದು, ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
Advertisement
ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ. ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಲ್ಲೂ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿತ್ತು. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.