ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದ ಹಿಂಭಾಗದ ರೈಲ್ವೇ ಹಳಿ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಬಾಲಕನ ಶವ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವಕನೊಬ್ಬನ ಸಲಿಂಗಕಾಮಕ್ಕೆ ಬಾಲಕ ಬಲಿಯಾಗಿರುವುದು ಪೊಲೀಸರ (Police) ತನಿಖೆ ವೇಳೆ ಬಯಲಾಗಿದೆ.
ಶುಕ್ರವಾರ 6 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಯುವಕನೊಬ್ಬ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಇದೀಗ ಮಾಹಿತಿ ನೀಡಿದ ಯುವಕನೇ ಕೊಲೆಗಾರ ಎಂಬುದು ತಿಳಿದು ಬಂದಿದೆ. ಬಸ್ ನಿಲ್ದಾಣದ ಬಳಿ ಇದ್ದ ಬಾಲಕನನ್ನು ಬಿಸ್ಕೇಟ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ದೌರ್ಜನ್ಯ ಎಸಗಿರುವುದಾಗಿ ಯುವಕ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಮದುವೆಗೆಂದು ಕರೆದೊಯ್ದು ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು!
Advertisement
Advertisement
ಇನ್ನೂ ಬಾಲಕನ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಯುವಕ ಹಿಂದೆಯೂ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿದ್ದನಾ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
Advertisement
Advertisement
ಜಿಲ್ಲಾ ಕ್ರೀಡಾಂಗಣದ ಹಿಂಭಾಗದ ರೈಲ್ವೇ ಹಳಿ ಪಕ್ಕದಲ್ಲಿ ಬಾಲಕನ ಶವ ಜ.26 ರಂದು ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಇನ್ನೂ ಬಾಲಕನ ಶವದ ಮೇಲೆ ಸಿಗರೇಟಿನಿಂದ ಸುಟ್ಟ ಗುರುತುಗಳು ಪತ್ತೆಯಾಗಿತ್ತು. ಬೇರೆಡೆ ಕೊಲೆಗೈದು ಶವವನ್ನು ಎಸೆದು ಹೋದ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ರಾಮನಗರ (Ramanagara) ಟೌನ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಮದುವೆಯಾಗಿ 12 ವರ್ಷ- ಇಬ್ಬರು ಮಕ್ಕಳನ್ನು ಬಿಟ್ಟು ಗೃಹಿಣಿ ಆತ್ಮಹತ್ಯೆ