ಬೆಂಗಳೂರು: ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕದಿಂದ ಆಗಮಿಸಿದ ಸಾಫ್ಟ್ ವೇರ್ ಎಂಜಿನಿಯರ್ ಅವರ ದೇಹದಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಮಾರ್ಚ್ 1 ರಂದು ಅಮೆರಿಕದಿಂದ ಆಗಮಿಸಿದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ತಿಳಿಸಿದೆ.
Advertisement
ಸಾಫ್ಟ್ ವೇರ್ ಎಂಜಿನಿಯರ್ , ಪತ್ನಿ, ಮಗಳ ಜೊತೆ ಚಾಲಕನನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ 982 ಮಂದಿ ಮೇಲೆ ನಿಗಾ ಇರಿಸಲಾಗಿದೆ. ಈ ಪೈಕಿ ಕಳೆ 28 ದಿನಗಳಿಂದ 266 ಮಂದಿ ಮೇಲೆ ನಿಗಾ ಇಟ್ಟಿದ್ದರೆ 700 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿ ನಿಗಾ ಇರಿಸಲಾಗಿದೆ.
Advertisement
Advertisement
ಇಂದು 12 ಮಂದಿ ವಿವಿಧ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಲ್ಲಿಯವರೆಗೆ 432 ಮಂದಿಯ ರಕ್ತದ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದು 364 ಮಂದಿ ಫಲಿತಾಂಶ ನೆಗೆಟಿವ್ ಬಂದಿದೆ. 68 ಮಂದಿಯ ಫಲಿತಾಂಶ ಲಭ್ಯವಾಗಬೇಕಿದೆ.
Advertisement
ಬೆಂಗಳೂರಿನಲ್ಲಿ 8, ಮಂಗಳೂರಿನಲ್ಲಿ 2, ಬಾಗಲಕೋಟೆ ಮತ್ತು ಹಾಸನದಲ್ಲಿ ತಲಾ ಒಂದೊಂದು ಮಂದಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
ಇಲ್ಲಿಯವರೆಗೆ ಒಟ್ಟು 91,911 ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 61,585 ಮಂದಿ, ಮಂಗಳೂರಿನಲ್ಲಿ 25,003 ಮಂದಿಯನ್ನು ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾರವಾರ ಮತ್ತು ಮಂಗಳೂರು ಬಂದರಿನಲ್ಲಿ ಒಟ್ಟು 5,323 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ ಎಂದು ತಿಳಿಸಿದೆ.