ನವದೆಹಲಿ: ಇಲ್ಲಿನ ರೋಹಿಣಿ ಪ್ರದೇಶದಲ್ಲಿರುವ ರಿಥಾಲಾ ಮೆಟ್ರೋ ನಿಲ್ದಾಣದ (Rithala Metro Station) ಬಳಿಯ ಸ್ಲಮ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು 500 ಗುಡಿಸಲುಗಳಿಗೆ ಬೆಂಕಿ ತಗುಲಿ, ಒಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
ಶುಕ್ರವಾರ (ನ.7) ರಾತ್ರಿ ದೆಹಲಿಯ ರಿಥಾಲಾ ಮೆಟ್ರೋ ನಿಲ್ದಾಣದ ಬಳಿಯ ರೋಹಿಣಿ ಸೆಕ್ಟರ್-5ರ ದೆಹಲಿ ಜಲಮಂಡಳಿ ಸಿಬ್ಬಂದಿ ಕ್ವಾರ್ಟರ್ಸ್ ಬಳಿಯ ಜುಗ್ಗಿಸ್‌ನಲ್ಲಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಪರಿಣಾಮ 500 ಗುಡಿಸಲುಗಳಿಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಕ್ಕೆ 29 ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸುವಲ್ಲಿ ತೊಡಗಿಕೊಂಡರು.ಇದನ್ನೂ ಓದಿ:ಫಿಟ್ಸ್ ಬಂದು ರಸ್ತೆಯಲ್ಲಿ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿ
ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬೆಂಕಿ ಆರಂಭದಲ್ಲಿ ಒಂದು ಗುಡಿಸಲಿನಲ್ಲಿ ಕಾಣಿಸಿಕೊಂಡಿತು. ಬಳಿಕ ಅಲ್ಲಿಂದ ಕೂಡಲೇ ಬೇರೆ ಗುಡಿಸಲುಗಳಿಗೆ ಹಬ್ಬಿಕೊಂಡಿತು. ಬೆಂಕಿ ಹೊತ್ತಿಕೊಂಡ ಪರಿಣಾಮ ಹಲವಾರು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಇದರಿಂದ ಬೆಂಕಿ ತೀವ್ರಗೊಂಡಿತು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.ಇದನ್ನೂ ಓದಿ: ಸಮಾಜದ ಹೃದಯ ಸಂಘದ ಪರವಾಗಿದೆ: RSS ಮುಖ್ಯಸ್ಥ ಮೋಹನ್ ಭಾಗವತ್

