ಎಕ್ಸ್‌ಪ್ರೆಸ್‌ ಹೈವೆಯಲ್ಲಿ 3 ಕಾರುಗಳ ನಡುವೆ ಸರಣಿ ಅಪಘಾತ – ಓರ್ವ ಸಾವು, 10 ಮಂದಿಗೆ ಗಾಯ

Public TV
1 Min Read
Ramanagara Accident

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಲಂಬಾಣಿ (Lambani) ತಾಂಡ್ಯದ ಬಳಿ ನಡೆದಿದೆ.

ಬೆಂಗಳೂರಿನಿಂದ (Bengaluru) ಮೈಸೂರು ಕಡೆಗೆ ವೇಗವಾಗಿ ಬರುತ್ತಿದ್ದ ಹೋಂಡಾ ಸಿವಿಕ್ ಕಾರಿನ ಚಾಲಕ, ಲಂಬಾಣಿ ತಾಂಡ್ಯದ ಬಳಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕದ ಮೇಲೆ ಕಾರು ಹತ್ತಿಸಿದ್ದಾನೆ. ವೇಗದ ತೀವ್ರತೆಗೆ ಕಾರು ಪಲ್ಟಿಯಾಗಿ ಪಕ್ಕದ ರಸ್ತೆಗೆ ಜಿಗಿದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕುಷ್ಟಗಿ ರೈಲು ಸಂಚಾರ ಶೀಘ್ರವೇ ಆರಂಭ: ಬಸವರಾಜ ರಾಯರೆಡ್ಡಿ

ಡಿಕ್ಕಿಯ ರಭಸಕ್ಕೆ ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂರೂ ಕಾರುಗಳಲ್ಲಿದ್ದ 10 ಮಂದಿಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೌಲರ್‌ಗಳ ಆಟಕ್ಕೆ 20 ವಿಕೆಟ್‌ ಪತನ – ಪಂಜಾಬ್‌ಗೆ ರೋಚಕ 16 ರನ್‌ಗಳ ಜಯ

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ನಂತರ ಕಾರುಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article