ಹುಬ್ಬಳ್ಳಿ: ರಾಜ್ಯದ ಒಂದೇ ಒಂದು ಹನಿ ನೀರು ಸಹ ಸಮುದ್ರ ಸೇರಲು ಬಿಡುವುದಿಲ್ಲವೆಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಹಾದಾಯಿ ಉಗಮ ಸ್ಥಾನ ಕಣಕುಂಬಿಗೆ ಭೇಟಿ ನೀಡುತ್ತಿದ್ದೇನೆ. ಮಹಾದಾಯಿ ವಿಚಾರವಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಪಾಲಿನ ನೀರು ಪಡೆಯಲು ಕಾನೂನಾತ್ಮಕ ಅಭಿಪ್ರಾಯ ಕೇಳಿದ್ದೇನೆ. ಮಹಾದಾಯಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು.
ನ್ಯಾಯಾಧೀಕರಣದ ತೀರ್ಪನ್ನು ಕೇಳಿ ಸುಮ್ಮನೆ ಕುಳಿತಿಲ್ಲ. ಕಾನೂನು ತಜ್ಞರು ಹಾಗೂ ತಾಂತ್ರಿಕ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಕಾವೇರಿಯ ಬಗ್ಗೆ ಇರುವ ಕಾಳಜಿ ಮಹಾದಾಯಿಗೆ ಇಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ನಮಗೆ ಮಹಾದಾಯಿ ವಿಚಾರದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಇಂದಿನ ಭೇಟಿ ಬಳಿಕ ಸರ್ವ ಪಕ್ಷಗಳ ಸಭೆ ಕರೆಯಲಾಗುವುದು. ಅಲ್ಲದೇ ರಾಜ್ಯದ ಒಂದೇ ಒಂದು ಹನಿ ನೀರು ಸಮುದ್ರ ಸೇರಲು ಬಿಡುವುದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮ ಶಾಸಕರು ಆಲ್ ಇಜ್ ವೆಲ್ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv