ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಮಾನ್ಯತೆ ಪಡೆದ ಕ್ರಿಕೆಟಿಗನೊಬ್ಬ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ.
ವಿಶ್ವ ಉದ್ದೀಪನಾ ಮದ್ದು ನಿಗ್ರಹ ದಳ(ವಾಡಾ) 2016ರಲ್ಲಿ ಬಿಸಿಸಿಐನಿಂದ ಮಾನ್ಯತೆ ಪಡೆದ 138 ಮಂದಿ ಆಟಗಾರರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಿತ್ತು. ಈ ಪರೀಕ್ಷೆಯಲ್ಲಿ ಓರ್ವ ಆಟಗಾರ ನಿಷೇಧಿತ ಮದ್ದು ಸೇವಿಸಿರುವುದುದ ದೃಢಪಟ್ಟಿದೆ.
Advertisement
ನಿಷೇಧಿತ ಮದ್ದು ಸೇವಿಸಿದ ಆಟಗಾರನ ಹೆಸರು ಬಹಿರಂಗವಾಗಿಲ್ಲ. ಆಟಗಾರ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿಲ್ಲ. ಬದಲಾಗಿ ಬಿಸಿಸಿಐ ಆಯೋಜಿಸುವ ರಣಜಿ ಟ್ರೋಫಿ, ದುಲೀಪ್ ಟ್ರೋಫಿ, ಐಪಿಎಲ್ ಅಥವಾ ಇರಾನಿ ಟ್ರೋಫಿ ಆಡಿರುವ ದೇಶೀಯ ಆಟಗಾರ ಎನ್ನುವ ಮಾಹಿತಿ ಲಭ್ಯವಾಗಿದೆ.
Advertisement
ಈ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಬಿಸಿಸಿಐ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಾಡಾದಿಂದ ಇದೂವರೆಗೂ ನಮಗೆ ಯಾವುದೇ ವರದಿ ಬಂದಿಲ್ಲ. ಅಷ್ಟೇ ಅಲ್ಲದೇ ಈಗಲೇ ಆ ಕ್ರಿಕೆಟ್ ಆಟಗಾರನ ಹೆಸರನ್ನು ಬಹಿರಂಗಪಡಿಸುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
Advertisement
ಆಟಗಾರನ ಮೂತ್ರದ ಮಾದರಿಯ ಪರೀಕ್ಷೆಯಲ್ಲಿ ನಿಷೇಧಿತ ಮದ್ದು ಸೇವಿಸಿರುವುದು ದೃಢಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Advertisement
2013ರ ಐಪಿಎಲ್ ಆವೃತ್ತಿ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರದೀಪ್ ಸಾಂಗ್ವಾನ್ ಡೋಪಿಂಗ್ ಸುಳಿಯಲ್ಲಿ ಸಿಲುಕಿದ್ದರು. ಇದಾದ ಬಳಿಕ ಭಾರತದ ಕ್ರಿಕೆಟ್ ವಲಯದಲ್ಲಿ ಬೆಳಕಿಗೆ ಬರುತ್ತಿರುವ ಎರಡನೇ ಪ್ರಕರಣ ಇದಾಗಿದೆ.