ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ(Moscow) ಮೇಲೆ ಇಂದು(ಮೇ 17) ನಡೆದ ಭೀಕರ ಡ್ರೋನ್ ದಾಳಿಯಲ್ಲಿ ಓರ್ವ ಭಾರತೀಯ (Indian) ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮೂವರು ಭಾರತೀಯರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಷ್ಯಾ ಮತ್ತು ಉಕ್ರೇನ್ (Russia- Ukraine) ನಡುವಿನ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ, ಉಕ್ರೇನ್ ಸೇನೆಯು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡ ಜಂಟಿ ಡ್ರೋನ್ ದಾಳಿಯನ್ನು ನಡೆಸಿದೆ.
ಮಾಸ್ಕೋ ಸಮೀಪದ ಖಿಮ್ಕಿ ಮತ್ತು ಮೈತಿಶ್ಚಿ ವಸತಿ ಪ್ರದೇಶಗಳ ಮೇಲೆ ಡ್ರೋನ್ ಅವಶೇಷಗಳು ಬಿದ್ದಿದ್ದು, ತೈಲ ಸಂಸ್ಕರಣಾಗಾರಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಒಟ್ಟು ನಾಲ್ಕು ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ; ಇದರಲ್ಲಿ ಒಬ್ಬ ಭಾರತೀಯ ಕಾರ್ಮಿಕ ಮೃತಪಟ್ಟಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.
One Indian worker has lost his life and three others have been injured in a drone attack in Moscow region earlier today. Embassy officials have visited the location and met the injured workers in the hospital.
The Embassy condoles the loss of life and is working with the…
— India in Russia (@IndEmbMoscow) May 17, 2026
ಕಳೆದ 24 ಗಂಟೆಗಳಲ್ಲಿ 1,000ಕ್ಕೂ ಹೆಚ್ಚು ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾ ಹೇಳಿದೆ. ಇದನ್ನೂ ಓದಿ: ರಷ್ಯಾ ಮೇಲೆ 550ಕ್ಕೂ ಹೆಚ್ಚು ಭೀಕರ ಡ್ರೋನ್ ದಾಳಿ- 4 ಮಂದಿ ಸಾವು

