– ಚುನಾವಣೆಗೆ ಆರ್‌ಜೆಡಿಯಿಂದ ಭರ್ಜರಿ ಕೊಡುಗೆ
– ಬಿಹಾರದಲ್ಲಿ ಮುಂದುವರಿದ ಸೀಟು ಹಂಚಿಕೆ ಕಸರತ್ತು
ಪಾಟ್ನಾ: ಬಿಹಾರ ವಿಧಾನಸಭೆಗೆ (Bihar Assembly Elections) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಒಂದು ಕಡೆ ಸೀಟು ಹಂಚಿಕೆ ಲೆಕ್ಕಚಾರಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಭರಪೂರ ಕೊಡುಗೆಗಳ ಘೋಷಣೆ ಆರಂಭವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಬಿಹಾರದ ಪ್ರತಿ ಮನೆಯಿಂದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ (Government Job) ನೀಡಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಭರವಸೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದ 20 ದಿನಗಳಲ್ಲಿ ಉದ್ಯೋಗ ಖಾತರಿಪಡಿಸುವ ಹೊಸ ಕಾನೂನನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೆ ತರಲಾಗುವುದು. 20 ತಿಂಗಳಲ್ಲಿ ಒಂದೇ ಒಂದು ಮನೆಯೂ ಸರ್ಕಾರಿ ಉದ್ಯೋಗವಿಲ್ಲದೆ ಇರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ
ಭರವಸೆಗೆ ದತ್ತಾಂಶ ಬೆಂಬಲವಿದೆ, ಇದು ನನ್ನ ಪ್ರತಿಜ್ಞೆ. ಇದನ್ನು ಮಾಡಲು ಸಾಧ್ಯವಿದೆ. ಇದು ಜುಮ್ಲೆಬಾಜಿ ಅಲ್ಲ. ಬಿಹಾರದ ಜನರು ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಜೊತೆಗೆ, ನಾವು ಬಿಹಾರದ ಜನರಿಗೆ ಆರ್ಥಿಕ ನ್ಯಾಯವನ್ನು ಸಹ ಖಚಿತಪಡಿಸುತ್ತೇವೆ. ಇದನ್ನು ಸಾಧಿಸಬಹುದು, ಇದಕ್ಕೆ ದೃಢಸಂಕಲ್ಪ ಮಾತ್ರ ಬೇಕಾಗುತ್ತದೆ. ಎನ್‌ಡಿಎ ನಮ್ಮ ಘೋಷಣೆಗಳನ್ನು ನಕಲಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಟೇಕಾಫ್ ಆದ ಕೆಲವೇ ಹೊತ್ತಲ್ಲಿ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್
ಈ ನಡುವೆ ಎನ್‌ಡಿಎ ಒಕ್ಕೂಟದಲ್ಲಿ ಸೀಟು ಹಂಚಿಕೆಗೆ ತಿಕ್ಕಾಟ ನಡೆಯುತ್ತಿದೆ. ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ 40ರಿಂದ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದು, ಬಿಜೆಪಿ ಅವರಿಗೆ ಸುಮಾರು 20 ಸ್ಥಾನಗಳನ್ನು ನೀಡಲು ನಿರ್ಧರಿಸಿದೆ. ಆದರೆ ಇದಕ್ಕೆ ಚಿರಾಗ್ ಪಾಸ್ವಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಚಿರಾಗ್ ಪಾಸ್ವಾನ್, ಮಾತುಕತೆ ನಡೆಯುತ್ತಿವೆ. ಕೇಂದ್ರ ಸಚಿವರಾಗಿ ಉಳಿಯುವವರೆಗೆ ಸಚಿವಾಲಯದ ಜವಾಬ್ದಾರಿಗಳು ನನಗಿರುತ್ತವೆ, ಅದನ್ನು ಮಾಡುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ
ಸೀಟು ಹಂಚಿಕೆ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ಬಿಜೆಪಿ ಪ್ರಯತ್ನ ಮಾಡುತ್ತಿದೆ. ಎಲ್‌ಜೆಪಿ ನಾಯಕ ಚಿರಾಗ್ ಅವರನ್ನು ಕೇಂದ್ರ ಸಚಿವ ನಿತ್ಯಾನಂದ ರೈ ಭೇಟಿಯಾಗಿದ್ದಾರೆ. ಇದಕ್ಕೂ ಮೊದಲು, ಬಿಹಾರ ಚುನಾವಣೆಗೆ ಬಿಜೆಪಿಯ ಉಸ್ತುವಾರಿ ವಹಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ಪಾಸ್ವಾನ್ ಅವರನ್ನು ಭೇಟಿಯಾಗಿದ್ದರು. ಅವರೊಂದಿಗೆ ಬಿಹಾರ ಸಚಿವ ಮಂಗಲ್ ಪಾಂಡೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಇದ್ದರು. ಇದನ್ನೂ ಓದಿ: ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ `ನಟ್ಟು ಬೋಲ್ಟ್’ ಹೇಳಿಕೆಗೂ ಸಂಬಂಧವಿಲ್ಲ: ಶಿವರಾಜ್ ತಂಗಡಗಿ
ಈ ನಡುವೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಸಿದ್ದು, 20-30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ. ಆದರೆ ಇಂಡಿಯಾ, ಎನ್‌ಡಿಎ ಸೀಟು ಹಂಚಿಕೆ ಕಸರತ್ತು ಮುಗಿದ ಬಳಿಕ ಅಭ್ಯರ್ಥಿಗಳ ಹೆಸರು ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ: ಪ್ರದೀಪ್ ಈಶ್ವರ್