ಪಾಟ್ನಾ: ಬಿಹಾರದ (Bihar) ಬೇಗುಸರಾಯ್ (Begusarai) ಜಿಲ್ಲೆಯಲ್ಲಿ ನಿನ್ನೆ ಬೈಕ್‍ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು (Gunmen Shot) ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಏಕಾಏಕಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.
Advertisement
ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‍ನಲ್ಲಿ ಮಲ್ಹಿಪುರ್ ಚೌಕ್‍ಗೆ ಬಂದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು
Advertisement
https://twitter.com/MithilaWaala/status/1569875146865020928
Advertisement
ರಾಷ್ಟ್ರೀಯ ಹೆದ್ದಾರಿ 31 ಮತ್ತು 28ರಲ್ಲಿ (NH 31 & 28) ಬಂದೂಕುದಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ಭಯಭೀತರಾದ ಜನರು ದಿಕ್ಕಾಪಾಲಾಗಿ ಓಡಲು ಪ್ರಾರಂಭಿಸಿದ್ದಾರೆ. ಅಂಗಡಿಯವರು ತಮ್ಮ ಅಂಗಡಿಗಳನ್ನು ಬಿಟ್ಟು ಓಡಿದ್ದಾರೆ. ನಂತರ ಬಂದೂಕುಧಾರಿಗಳು ಬರೌನಿ ಥರ್ಮಲ್ ಚೌಕ್, ಬರೌನಿ, ತೆಘ್ರಾ, ಬಚ್ವಾರಾ ಮತ್ತು ರಾಜೇಂದ್ರ ಸೇತುವೆಗೆ ತೆರಳಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Rantac ಸೇರಿದಂತೆ 26 ಔಷಧಿಗಳನ್ನು ನಿಷೇಧಿಸಿದ ಕೇಂದ್ರ
Advertisement
Bihar | DIG Begusarai Satya Veer Singh met the victims of mass shooting incident at a hospital in Begusarai (13.09)
One person was killed while nine were injured in an indiscriminate firing by bike-borne assailants at different locations in Begusarai, yesterday pic.twitter.com/42Kq2DB3iO
— ANI (@ANI) September 13, 2022
ಘಟನೆಯಲ್ಲಿ ಚಂದನ್ ಕುಮಾರ್ (30) ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಗಾಯಾಳುಗಳಲ್ಲಿ ಕೆಲವರನ್ನು ಬೇಗುಸರಾಯ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಘಟನೆಯ ನಂತರ ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಡಿಐಜಿ ಬೇಗುಸರಾಯ್ ಸತ್ಯ ವೀರ್ ಸಿಂಗ್ ಗಾಯಗೊಂಡವರ ಆರೋಗ್ಯದ ಕುರಿತಾಗಿ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ.