Tuesday, 17th July 2018

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ರಾಷ್ಟ್ರೀಯ 4ರಲ್ಲಿ ಈ ಘಟನೆ ಸಂಭವಿಸಿದೆ.

ಪಿಳ್ಳೇಕೇರನಹಳ್ಳಿಯ ಅಣ್ಣಪ್ಪ(35) ಮೃತಪಟ್ಟ ವ್ಯಕ್ತಿ. ಖಾಸಗಿ ಬಸ್ ನಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತಿತ್ತು. ಈ ವೇಳೆ ಚಾಲನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಸ್ ನಲ್ಲಿ ಬೆರಳಣಿಕೆಯಷ್ಟು ಪ್ರಯಾಣಿಕರು ಇದ್ದರಿಂದ ಹೆಚ್ಚಿನ ಅನಾಹುತ ಏನೂ ಅಗಿಲ್ಲ. ಬಸ್ ನ ಅಡಿಯಲ್ಲಿ ಪ್ರಯಾಣಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಕ್ರೇನ್ ಸಹಾಯದಿಂದ ಬಸ್ಸನ್ನು ಮೇಲಕ್ಕೆ ಎತ್ತಿದಾಗ ಯಾರು ಅಡಿಯಲ್ಲಿ ಸಿಲುಕಿರಲಿಲ್ಲ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *