ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಒಂದು ಪೋಸ್ಟ್‌ನಿಂದಾಗಿ 2 ಸಮುದಾಯದ ಗುಂಪುಗಳ ನಡುವೆ ಭಾರೀ ಘರ್ಷಣೆ (Clash) ನಡೆದು ಒಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಅಕೋಲಾದಲ್ಲಿ (Akola) ನಡೆದಿದೆ.
ನಗರದ ಓಲ್ಡ್ ಸಿಟಿಯ ಸೂಕ್ಷ್ಮ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಒಬ್ಬ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 8 ಜನರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಧಾರ್ಮಿಕ ಸಂಬಂಧಿತ ಪೋಸ್ಟ್ ಒಂದನ್ನು ಹಾಕಿದ್ದು ಬಳಿಕ ಅದು ವೈರಲ್ ಆಗಿದೆ. ಬಳಿಕ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. 2 ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಹಲವು ವಾಹನಗಳಿಗೂ ಹಾನಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ನೆಪದಲ್ಲಿ ಕರೆದೊಯ್ದು ಕಾರಿನಲ್ಲಿ ಕಿರುಕುಳ- ಬೈಕಲ್ಲಿ ಬಂದವ್ರಿಂದ ಮಹಿಳೆ ರಕ್ಷಣೆ
Advertisement
ಗಲಭೆಕೋರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರು ಗುಂಪು ಗೂಡುವುದನ್ನು ನಿಷೇಧಿಸುವ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ