ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ (Forest Department) ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಗುಂಡೇಟಿಗೆ ಬಲಿಯಾದ ಘಟನೆ ಬಂಡೀಪುರದ (Bandipur) ಮದ್ದೂರು ಅರಣ್ಯ ವಲಯದಲ್ಲಿ ನಡೆದಿದೆ.
ಗುಂಡೇಟಿಗೆ ಬಲಿಯಾದ ಬೇಟೆಗಾರನನ್ನು ಭೀಮನಬೀಡು ಗ್ರಾಮದ ಮನು (35) ಎಂದು ಗುರುತಿಸಲಾಗಿದೆ. ಸುಮಾರು 10 ಮಂದಿ ಬೇಟೆಗಾರರು ಅರಣ್ಯ ವಲಯದಲ್ಲಿ ಕಡವೆಯನ್ನು ಭೇಟೆಯಾಡಿ ಮಾಂಸ ಕೊಂಡೊಯ್ಯುತ್ತಿದ್ದರು. ಈ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅವರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿದಾಳಿ ನಡೆಸಿದಾಗ ಬೇಟೆಗಾರನಿಗೆ ಗುಂಡು ತಗುಲಿದ್ದು ಆತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ದೇಶದಲ್ಲಿ ಫಸ್ಟ್ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್ ಬಳೆ
Advertisement
Advertisement
ಘಟನೆ ನಡೆದ ಬಳಿಕ ಉಳಿದ ಬೇಟೆಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕನ ರಕ್ಷಣೆ