ರೀಲ್ಸ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಮಿಂಚ್ತಿರುವ ಸೋನು ಗೌಡ ಬಿಗ್ ಬಾಸ್ ಓಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಸೋನು ಬಗ್ಗೆ ಎಂಟ್ರಿಯ ಬಗ್ಗೆ ಪರ ವಿರೋಧ ಚರ್ಚೆ ಆಗುತ್ತಿದೆ. ಇದರ ನಡುವೆ ಸ್ಪರ್ಧಿಗಳು ತಮ್ಮ ಬದುಕಿನ ಅನೇಕ ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಈ ವೇಳೆ ಸೋನು ಗೌಡ ತಮ್ಮ ಇನ್ನೊಂದು ಖಾಸಗಿ ವಿಡಿಯೋವೊಂದು ಲೀಕ್ ಬಗ್ಗೆ ಮಾತನಾಡಿದ್ದಾರೆ.
ಇಂಟರ್‌ನೆಟ್‌ನ ಸೆನ್ಸೇಷನ್ ಸ್ಟಾರ್ ಸೋನು ಗೌಡ ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಾನು ಯಾರು ಟಾಸ್ಕ್ ನೀಡಲಾಗಿತ್ತು. ಈ ವೇಳೆ ಎಲ್ಲಾ ಸ್ಪರ್ಧಿಗಳು ತಮ್ಮ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಹಾಗೆಯೇ ಸೋನು ಗೌಡ ಕೂಡ ತಮ್ಮ ವೀಡಿಯೋ ಲೀಕ್ ಆಗಿದ್ದರ ಬಗ್ಗೆ ಮಾತನಾಡಿದ್ದಾರೆ.
ನನ್ನ ಪರಿಚಯದ ವ್ಯಕ್ತಿಯೊಬ್ಬ ನನ್ನ ಜೊತೆ ಮೂರು ವರ್ಷ ಇದ್ದ. ಅವನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋದ ನಂತರ ಪ್ರಪೋಸ್ ಮಾಡಿದ. ನಾನೂ ಒಪ್ಪಿಕೊಂಡೆ. ನಂತರ ನಮ್ಮ ಪ್ರೀತಿ ನಿಜವಾಗಿದ್ದರೆ ವಿಡಿಯೋ ಕಾಲ್ ಮಾಡು ಅಂದ. ನಾನು ನೇರವಾಗಿ ವಿಡಿಯೋ ಕಾಲ್ ಮಾಡಿದೆ.ಆದರೆ ಅವನು ಅದನ್ನೆಲ್ಲ ರೆಕಾರ್ಡ್ ಮಾಡಿಕೊಂಡ ಎಂದು ಸೋನು ಗೌಡ ಹೇಳಿದ್ದಾರೆ. ನೀನು ನನ್ನನ್ನು ಬಿಟ್ಟು ಬೇರೆ ಯಾರನ್ನೂ ಮದುವೆ ಆಗೋಕೆ ಆಗಲ್ಲ ಅಂತ ಆತ ಬ್ಲಾಕ್ ಮೇಲ್ ಮಾಡಲು ಶುರುಮಾಡಿದ. ಒಂದೇ ಕ್ಷಣದಲ್ಲಿ ನಾನು ನಮ್ಮ ಮನೆಯ ಮಾನ ಮರ್ಯಾದೆ ತೆಗೆದುಹಾಕಿಬಿಟ್ಟೆ. ಹುಡುಗಿಯಾಗಿ ಹುಟ್ಟಿದ್ದೇ ತಪ್ಪಾಯ್ತು ಅಂತ ಅಳಲು ಶುರುಮಾಡಿದೆ. ಕುಟುಂಬದವರು ಮತ್ತು ಸಂಬಂಧಿಕರೆಲ್ಲ ನನಗೆ ಬೈಯ್ದರು ಎಂದು ಆ ಕಹಿ ಘಟನೆಯನ್ನು ನೆನಪು ಮಾಡಿಕೊಂಡು ಸೋನು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:ಪೊಲೀಸ್ ಠಾಣೆ ತಲುಪಿದ ನಿರ್ಮಾಪಕರ ವಲಯದ ಚುನಾವಣೆ ಪ್ರಕ್ರಿಯೆ
ಇದೀಗ ಆ ವ್ಯಕ್ತಿಯ ಬಳಿ ಸೋನು ಅವರ ಇನ್ನೊಂದು ವಿಡಿಯೋ ಇದೆಯಂತೆ. ವಿಡಿಯೋ ಲೀಕ್ ಆದ ಬಳಿಕ ನಾನು ಅಪ್ಪನ ಮನೆಗೆ ಒಮ್ಮೆಯೂ ಹೋಗಿಲ್ಲ. ಯಾಕೆಂದರೆ ನನಗೆ ಮುಖ ತೋರಿಸೋಕೆ ಆಗ್ತಾ ಇಲ್ಲ. ತಪ್ಪು ಮಾಡಿದ್ದೀನಿ. ಅದನ್ನು ಒಪ್ಪಿಕೊಳ್ತೇನೆ. ಹುಡುಗಿಯರು ನನ್ನ ರೀತಿ ಸ್ಟ್ರಾಂಗ್ ಆಗಿರಿ. ಒಮ್ಮೆ ಮಾಡಿದ ತಪ್ಪನ್ನು ಮತ್ತೆ ಮಾಡಬೇಡಿ. ಅವನ ಬಳಿ ಇದ್ದಿದ್ದು ಎರಡು ವಿಡಿಯೋ. ಒಂದು ವಿಡಿಯೋ ಲೀಕ್ ಮಾಡಿದ್ದಾನೆ. ಅವನ ಹತ್ತಿರ ಇನ್ನೊಂದು ವಿಡಿಯೋ ಇದೆ. ಅದನ್ನು ಯಾವಾಗ ಬಿಡುತ್ತಾನೋ ನನಗೆ ನಿಜವಾಗಿ ಗೊತ್ತಿಲ್ಲ. ನನಗೆ ಆದಂತೆ ಬೇರೆ ಯಾವ ಹುಡುಗಿಯರಿಗೂ ಆಗಬಾರದು ಎಂದು ಸೋನು ಗೌಡ ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]