ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ (One Nation One Election) ಮಸೂದೆ ಇಂದು ಲೋಕಸಭೆಯಲ್ಲಿ (Lok Sabha) ಮಂಡನೆಯಾಗುವ ಸಾಧ್ಯತೆಯಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ. ಮಸೂದೆ ಮಂಡಿಸಿದ ನಂತರ, ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ (JPC) ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ಮಹಿಳಾ ಕಾರ್ಮಿಕರು ಸಿಗದೇ ರೈತರ ಪರದಾಟ
Advertisement
Advertisement
ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ. ಲೋಕಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ (BJP) ಸಮಿತಿಯ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಹಲವು ಪಕ್ಷಗಳ ಸಂಸದರು ಸದಸ್ಯರಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಇದನ್ನೂ ಓದಿ: 30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?
Advertisement
ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿತ್ತು.
Advertisement
ಸಂವಿಧಾನ ಜಾರಿಗೆ 75 ವರ್ಷ ಪೂರ್ಣ ಹಿನ್ನಲೆ ರಾಜ್ಯಸಭೆಯಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಪ್ರಧಾನಿ ಮೋದಿ ಇಂದು ಭಾಗಿಯಾಗಲಿದ್ದು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.