– ವಿಪಕ್ಷಗಳಿಂದ ವಿರೋಧ – ಮಸೂದೆ ಮಂಡನೆ ಪರ 269, ವಿರುದ್ಧ 198 ಮತ
ನವದೆಹಲಿ: ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ʻಒಂದು ರಾಷ್ಟ್ರ ಒಂದು ಚುನಾವಣೆʼ ಮಸೂದೆಯನ್ನು (One Nation, One Election Bill) ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಮಸೂದೆ ಮಂಡನೆ ಬಳಿಕ ಉಭಯ ಸದನಗಳ ಪರಾಮರ್ಷೆಗಾಗಿ ಜಂಟಿ ಸಂಸದೀಯ ಸಮಿತಿಗೆ (JPC) ಕಳುಹಿಸಲಾಗಿದೆ. ಆದರೆ, ಇದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ
Advertisement
Advertisement
ಹೊಸ ಸಂಸತ್ ಭವನದಲ್ಲಿ ಮಸೂದೆ ಮಂಡನೆಗೆ ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ವೋಟಿಂಗ್ (E Voting) ವ್ಯವಸ್ಥೆ ಬಳಕೆ ಮಾಡಲಾಯಿತು. 269 ಸದಸ್ಯರು ಪರವಾಗಿ ಮತ ಚಲಾಯಿಸಿದ್ರೆ, 198 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ನಂತರ ಕಲಾಪವನ್ನು 1 ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು. ನಂತರ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಸರ್ಕಾರದ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ, 1963, ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ ಕಾಯ್ದೆ, 1991 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ದಿನದ ವೇಳಾಪಟ್ಟಿಯಂತೆ ತಿದ್ದುಪಡಿ ಮಸೂದೆ ಮಂಡಿಸಿದರು.
Advertisement
Advertisement
ಒಂದು ದೇಶ – ಒಂದು ಚುನಾವಣೆ ಅಂದ್ರೆ ಏನು?
ಪ್ರಮುಖವಾಗಿ ಒಂದು ದೇಶ, ಒಂದು ಚುನಾವಣೆ ಅಂದ್ರೆ ಏನು ಎಂಬುದನ್ನು ನೋಡುವುದಾದರೆ, ಹೆಸರೇ ಹೇಳುವಂತೆ ಒನ್ ನೇಷನ್ ಒನ್ ಎಲೆಕ್ಷನ್ ಅಂದ್ರೆ ರಾಷ್ಟ್ರದ ಎಲ್ಲ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಯತ್ನ. ಈಗ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬೇರೆ ಬೇರೆ ಅವಧಿಯಲ್ಲಿ ನಡೆಯುತ್ತಿದ್ದು, ಅವುಗಳನ್ನು ಏಕಕಾಲದಲ್ಲಿ ನಡೆಸಬೇಕು ಎನ್ನುವ ಉದ್ದೇಶ ಈ ಮಸೂದೆಯ ಹಿಂದಿದೆ.
ಸ್ವಾತಂತ್ರ್ಯ ಬಂದಾಗಿನಿಂದ ವಿಧಾನಸಭೆ, ಲೋಕಸಭೆ ಸೇರಿ ಭಾರತದಲ್ಲಿ ಸುಮಾರು 400 ಚುನಾವಣೆಗಳು ನಡೆದಿವೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ಚುನಾವಣೆಗೂ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಈ ಕಾರಣಕ್ಕಾಗಿ ಒಂದು ದೇಶ, ಒಂದು ಚುನಾವಣೆ ತರಬೇಕು ಎಂದು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲೂ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ಕೂಡ ನೀಡಿದ್ದು, ಅದರಂತೆ ಲೋಕಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆಯಾಗಿದೆ.
ವಿಧೇಯಕ ಮಂಡಿಸಲು ನಡೆದ ಮತದಾನದಲ್ಲಿ 461 ಸದಸ್ಯರು ಪಾಲ್ಗೊಂಡಿದ್ದರು. ಈ ಪೈಕಿ ಬಹುಮತಕ್ಕೆ 3ನೇ ಎರಡರಷ್ಟು ಅಂದ್ರೆ, 307 ಮತಗಳ ಅಗತ್ಯವಿತ್ತು. ಆದ್ರೆ ಎನ್‌ಡಿಎ 269 ಮತಗಳನ್ನು ಪಡೆದುಕೊಂಡು, ಪ್ರತಿಪಕ್ಷಗಳು 198 ಮತ ಗಳಿಸಿಕೊಂಡವು. ಇದರಿಂದ ಬಬಹುಮತ ಗಳಿಸುವಲ್ಲಿ ಸರ್ಕಾರ ವಿಫಲವಾಯಿತು. ಈ ಕುರಿತ ಇ-ವೋಟಿಂಗ್‌ನ ಸ್ಕ್ರೀನ್‌ಶಾಟ್ ಚಿತ್ರವೊಂದನ್ನು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಮತದಾನದ ಮೂಲಕ ಬಿಜೆಪಿಯವರು ಹೆಚ್ಚುಕಾಲ ಉಳಿಬಾರದು ಎಂಬ ಸಂದೇಶ ಸ್ಪಷ್ಟವಾಗಿದೆ. ಈ ಮಸೂದೆಗೆ ಸ್ಪಷ್ಟ ಬೆಂಬಲ ಸಿಕ್ಕಿಲ್ಲ. ಅನೇಕ ಪಕ್ಷಗಳು ಇದರ ವಿರುದ್ಧವಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ