– ಏಕತಾ ದಿನದಂದು ಪ್ರಧಾನಿ ಭಾಷಣ
ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ಬಳಿಕ ಮಾತನಾಡುತ್ತಾ, ರಾಷ್ಟ್ರೀಯ ಏಕತಾ ದಿವಸ್ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.
ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್‌ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದರು.
2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ್ದ ಪ್ರಧಾನಿ, ಇದೀಗ ಅದನ್ನು ಶಾಶ್ವತವಾಗಿ ಸಮಾಧಿ ಮಾಡಲಾಗಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.ಇದನ್ನೂ ಓದಿ: ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿಕೆಶಿ ಸ್ಪಷ್ಟನೆ



