ಭೋಪಾಲ್: ಕಳೆದ ವರ್ಷ ನಮೀಬಿಯಾದಿಂದ (Namibia) ತಂದಿದ್ದ 8 ಚೀತಾಗಳ (Cheetahs) ಪೈಕಿ, ಕಿಡ್ನಿ ಸೋಂಕಿನಿಂದ (Kidney Ailment) ಬಳಲುತ್ತಿದ್ದ ಒಂದು ಚೀತಾ ಸಾವನ್ನಪ್ಪಿದೆ.
ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಚೀತಾ ಸೋಮವಾರ ಮೃತಪಟ್ಟಿದೆ. ಸಾಶಾ ಭಾರತಕ್ಕೆ ಕರೆತರುವ ಮುನ್ನವೇ ಅನಾರೋಗ್ಯದಿಂದ ಬಳಲುತ್ತಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶಕ್ಕೆ ಮಹಾಶಿವರಾತ್ರಿಯಂದು ಉಡುಗೊರೆ ಸಿಕ್ಕಿದೆ – ಚೀತಾಗಳ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ
Advertisement
Advertisement
ಈ ವರ್ಷದ ಜನವರಿ 23ರಂದು ಸಾಶಾ ಚೀತಾದಲ್ಲಿ ಅನಾರೋಗ್ಯ ಲಕ್ಷಣಗಳು ಕಂಡುಬಂದಿತ್ತು. ನಂತರ ಆ ಚೀತಾವನ್ನು ಚಿಕಿತ್ಸೆಗಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇದನ್ನೂ ಓದಿ: ಭಾರತಕ್ಕೆ ಮತ್ತೆ 12 ಚೀತಾಗಳ ಆಗಮನ
Advertisement
ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಸ್ವತಃ ಬೇಟೆಯಾಡಲು ಆರಂಭಿಸಿದ್ದವು.
Advertisement
ಚೀತಾ ವಿಶೇಷತೆಯೇನು?
ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.