ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಮಾರ್ಚ್ 21 ರಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಸಂಜೆ 4:30ಕ್ಕೆ ಮಂಗಳೂರಿಗೆ ತೆರಳಿದ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಗೆ ಕೊರೊನಾ ಬಂದಿದೆ. ಹೀಗಾಗಿ ನಂ.ಕೆಎ 19 ಎಫ್3329 ನಂಬರಿನ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ತೆರಳಿದ ಎಲ್ಲ ಪ್ರಯಾಣಿಕರು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಬೇಕೆಂದು ಕೆಎಸ್ಆರ್‌ಟಿಸಿ ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದೆ.
Advertisement
ಈ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರು ದಯವಿಟ್ಟು ಈ ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಕೋರಲಾಗಿದೆ.
(2/2)
— KSRTC (@KSRTC_Journeys) March 28, 2020
Advertisement
ಉತ್ತರ ಕನ್ನಡ ಜಿಲ್ಲೆಯ 65 ವರ್ಷದ ವ್ಯಕ್ತಿಯೊಬ್ಬರು ದುಬೈಗೆ ಪ್ರಯಾಣ ಬೆಳೆಸಿ ಮಾರ್ಚ್ 17ಕ್ಕೆ ಮುಂಬೈ ಮೂಲಕ ಭಾರತಕ್ಕೆ ಬಂದಿದ್ದರು. ಅಂದು ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನ ಎಸ್3 ಕೋಚ್ ಲೋಯರ್ ಬರ್ತ್ ನಲ್ಲಿ ಮುಂಬೈನಿಂದ ಭಟ್ಕಳಕ್ಕೆ ಮಾರ್ಚ್ 18 ರಂದು ಮರಳಿದ್ದರು.
Advertisement
ಕೊರೊನಾ ಈಗ ಮೂರನೇ ವ್ಯಕ್ತಿಗಳಿಗೂ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬೋಗಿಯಲ್ಲಿನ ಪ್ರಯಾಣಿಸಿದ ಎಲ್ಲ ಪ್ರಯಾಣಿಕರು ದಯವಿಟ್ಟು ಈ ಕೂಡಲೇ ಶುಲ್ಕ ರಹಿತ 104, 080-4684600 ಅಥವಾ 080 66692000 ನಂಬರಿಗೆ ಕರೆ ಮಾಡಬೇಕು ಎಂದು ಸರ್ಕಾರ ಕೇಳಿಕೊಂಡಿದೆ.