ಬೆಂಗಳೂರು: ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಇಂದು ಕೊಡಗಿನಲ್ಲಿ ಮೊದಲ #ಕೋವಿಡ್19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #ಕೋವಿಡ್19 ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.
Advertisement
ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.
— B Sriramulu (@sriramulubjp) March 19, 2020
Advertisement
ಬುಧವಾರ ಒಟ್ಟು 37 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 25, ಉತ್ತರ ಕನ್ನಡ ಮತ್ತು ಕಲಬುರಗಿಯಲ್ಲಿ 3, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ 2, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ತಲಾ ಒಬ್ಬೊಬ್ಬರು ದಾಖಲಾಗಿದ್ದಾರೆ. ಒಟ್ಟು ರಾಜ್ಯದಲ್ಲಿ 80 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ.
Advertisement
#Covid19 ಸೋಂಕು ಹರಡುವುದನ್ನು ತಡೆಯಲು ಮುಂಜಾಗೃತ ಕ್ರಮವಾಗಿ ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರಿಗೆ 14 ದಿನಗಳ ಪ್ರತ್ಯೇಕಿಕರಣದ ಗುರುತಾಗಿ, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ #IndiaFightsCorona pic.twitter.com/cE0gx63JHr
— B Sriramulu (@sriramulubjp) March 19, 2020
Advertisement
15 ಕೊರೊನಾ ಪೀಡಿತರ ಪೈಕಿ ಈಗಾಗಲೇ ಮೊದಲ ರೋಗಿಯಾಗಿ ದಾಖಲಾಗಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಗುಣಮುಖರಾಗಿದ್ದಾರೆ. ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ರಾಜ್ಯದಲ್ಲಿ 11 ಮಂದಿ ಕೊರೊನಾ ಪೀಡಿತರಿದ್ದು ಬೆಂಗಳೂರಿನಲ್ಲಿ 8 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ ಕಲಬುರಗಿಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊಡಗಿಲ್ಲಿ ಒಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರು, ಕೊರೊನ ಸೋಂಕು ಹರಡುವಿಕೆ ತಡೆಗಟ್ಟಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾತನಾಡಿದ್ದಾರೆ. pic.twitter.com/c4bv8tAnZ8
— CM of Karnataka (@CMofKarnataka) March 18, 2020
11 ಮಂದಿ ಯಾರೆಲ್ಲ?
1. ಮೈಂಡ್ ಟ್ರೀ ಕಂಪನಿಯ ಟೆಕ್ಕಿ
2. ಗೂಗಲ್ ಕಂಪನಿಯ ಟೆಕ್ಕಿ
3. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಮಗಳು
4. ಮೈಂಡ್ ಟ್ರೀ ಕಂಪನಿಯ ಟೆಕ್ಕಿ ಜೊತೆ ಪ್ರಯಾಣಿಸಿದ ಸಹೋದ್ಯೋಗಿ
5. ಯುಕೆ ಪ್ರವಾಸದಿಂದ ಹಿಂದಿರುಗಿದ ವಿದ್ಯಾರ್ಥಿನಿ
6. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ವೈದ್ಯ
7. ದುಬೈನಿಂದ ಮರಳಿದ್ದ 67 ವರ್ಷದ ಮಹಿಳೆ
8. ಅಮೆರಿಕದಿಂದ ಮರಳಿದ್ದ 56 ವರ್ಷದ ವ್ಯಕ್ತಿ
9. ಸ್ಪೇನ್ ದೇಶದಿಂದ ಮರಳಿದ್ದ 25 ವರ್ಷದ ಮಹಿಳೆ
10. ಅಮೆರಿಕದಿಂದ ಬಂದ 35 ವರ್ಷದ ಮಹಿಳೆ
11. ಸೌದಿ ಅರೇಬಿಯಾ ಪ್ರವಾಸದಿಂದ ಬಂದ ಕೊಡಗು ಮೂಲದ ವ್ಯಕ್ತಿ