ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಏರ್ ಶೋದ ಅಭ್ಯಾಸದ ವೇಳೆ ಸೂರ್ಯಕಿರಣ್ ವಿಮಾನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದು, ಇಬ್ಬರು ಪೈಲಟ್‍ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಆಗ್ನಿಶಾಮಕ ದಳದ ಡಿಜಿಪಿ ಎಂಎನ್ ರೆಡ್ಡಿ ಅವರು, ಎರಡು ವಿಮಾನಗಳ ನಡುವೆ ಆಕಾಶದಲ್ಲೇ ಡಿಕ್ಕಿ ಸಂಭವಿಸಿದ್ದು, ಇದರಲ್ಲಿ ಪೈಲಟ್ ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ವಾಯುಪಡೆ ಅಧಿಕಾರಿಗಳು ಈ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡುತ್ತಾರೆ. ನಾಳೆ ಏರ್ ಶೋ ಬಗ್ಗೆಯೂ ಅವರ ಸ್ಪಷ್ಟಪಡಿಸಲಿದ್ದಾರೆ. ಅಪಘಾತ ಸಂಭವಿಸಲು ಕಾರಣ ಏನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಾಯುಯಾನ ಇಲಾಖೆ ಘಟನೆ ಕುರಿತು ತನಿಖೆ ನಡೆಸಿ ಮಾಹಿತಿ ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಪೈಲಟ್‍ಗಳ ಸಾವಿನಿಂದ ಪಾರಾಗಿದ್ದಾರೆ. ಆದರೆ ಮೃತ ಪಟ್ಟ ಪೈಲಟ್ ಹೆಸರಿನ ಬಗ್ಗೆ ನನಗೆ ಮಾಹಿತಿ ಇಲ್ಲ. ಶೀಘ್ರವೇ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
Advertisement
ಘಟನೆಯ ಪ್ರತ್ಯಕ್ಷದರ್ಶಿ ಮಾತನಾಡಿ, ಘಟನೆ ನಡೆದ ತಕ್ಷಣ ನಾವು ಸ್ಥಳಕ್ಕೆ ಬಂದಿದ್ದೇವು. ಆದರೆ ಕ್ಷಣಾರ್ಧದಲ್ಲಿ ಬೆಂಕಿ ಎಲ್ಲೆಡೆ ಹಬ್ಬಿತ್ತು. ಘಟನೆ ನಡೆದ ಸ್ಥಳದಲ್ಲೇ ಹುಲ್ಲಿನ ಬಣವೆ ಇದ್ದ ಕಾರಣ ಬೆಂಕಿ ಮತ್ತಷ್ಟು ಹೆಚ್ಚಾಯಿತು. ಒಂದು ಬದಿಯಲ್ಲಿ ಪೈಲಟ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರನ್ನು ಕೂಡಲೇ ಸೇನಾ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಸಿದರು. ಅಲ್ಲದೇ ವಿಮಾನದ ಭಾಗ ಮನೆಯ ಮೇಲೆ ಬಿದ್ದಿದ್ದು, ಮನೆಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
Advertisement
ಸ್ಥಳದಲ್ಲಿ ವ್ಯಕ್ತಿಯೊಬ್ಬರ ತಲೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಇದರ ಬಗ್ಗೆ ಇನ್ನು ಅನುಮಾನ ಇದೆ. ಆದರೆ ಪೊಲೀಸರು ಸ್ಥಳಕ್ಕೆ ಬಂದ ವೇಳೆ ಅದು ವ್ಯಕ್ತಿಯ ತಲೆಯ ಭಾಗವೇ ಎಂದು ಮಾಹಿತಿ ನೀಡಿದ್ದರು. ಆ ಬಳಿಕ ಸಾರ್ವಜನಿಕರಿಗೆ ಸ್ಥಳಕ್ಕೆ ತೆರಳಲು ಅವಕಾಶ ನೀಡಲಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.
ಸದ್ಯ ಘಟನೆ ನಡೆದ ಸ್ಥಳಕ್ಕೆ ವಾಯುಪಡೆ ಅಧಿಕಾರಿಗಳು, ತಾಂತ್ರಿಕ ವರ್ಗ ಸೇರಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಕುರಿತು ಏರೋ ಇಂಡಿಯಾದಿಂದ ಇದೂವರೆಗೆ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.
https://www.youtube.com/watch?v=S8anwX84c_8
https://www.youtube.com/watch?v=0Ds2mZmS_PY
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv