ಇಂಪಾಲ: ಉಗ್ರರು (Militants) ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.
ಟೊರ್ಬಂಗ್ ಪ್ರದೇಶದಲ್ಲಿ ಇಬ್ಬರು ನಾಗರಿಕರನ್ನು ಉಗ್ರರು ಇತ್ತೀಚೆಗೆ ಅಪಹರಿಸಿದ್ದರು. ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದ ವೇಳೆ ಸಮೀಪದ ಪ್ರದೇಶ ಒಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಬಂದಿತ್ತು. ಇದರಿಂದಾಗಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಫೋನ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ: ಕುಸ್ತಿಪಟು ಬಜರಂಗ್ ಪೂನಿಯಾ ಆರೋಪ
ಇತ್ತೀಚೆಗೆ ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಹಿಂಸಾಚಾರ ಬುಗಿಲೆದ್ದಿತ್ತು. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕರ್ಫ್ಯೂ (Curfew) ಜಾರಿಯಲ್ಲಿದೆ. ಇದರ ನಡುವೆಯೇ ಉಗ್ರರು, ಪೊಲೀಸರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಚಟುವಟಿಕೆ ಆರಂಭಿಸಿದ್ದಾರೆ. ಉಗ್ರರನ್ನು ಹತ್ತಿಕ್ಕಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದು ಘಟನೆಯಲ್ಲಿ ದಿಮಾಪುರ್‌ನಿಂದ (Dimapur) ಇಂಫಾಲಗೆ (Imphal) ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದ 100 ಟ್ರಕ್‍ಗಳನ್ನು ಉತ್ತರ ಕಾಂಗ್‍ಫೋಕ್ಪಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅಪರಿಚಿತರು ತಡೆದ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ