– ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ?
ಬೆಂಗಳೂರು: ನಾಗಮಂಗಲದಲ್ಲಿ (Nagamangala Violence) ಅಂಗಡಿ ಸುಟ್ಟವರು, ಚಪ್ಪಲಿ, ಕಲ್ಲು ಎಸೆದವರನ್ನು ಕೇಸಿನಲ್ಲಿ ಸೇರಿಸಿಲ್ಲ. ಹಿಂದೂಗಳಿಗೆ ಒಂದು ರೀತಿ, ಮುಸಲ್ಮಾನರಿಗೆ ಇನ್ನೊಂದು ನೀತಿ. ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ? ಇದು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ಕಿಡಿಕಾರಿದ್ದಾರೆ.
Advertisement
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣಪತಿ ಹಬ್ಬ ಮಾಡುವ, ಮೆರವಣಿಗೆ ಹೋಗುವ ಹಿಂದೂ ಯುವಕರ ಮೇಲೆ ನೂರಾರು ಕಲ್ಲು ಎಸೆದಿದ್ದಲ್ಲದೇ, ಗಣಪತಿ ಮೂರ್ತಿ ಮೇಲೆ ಚಪ್ಪಲಿ ಎಸೆದಿದ್ದಾರೆ. ಹಿಂದೂಗಳ ಮೇಲೆ ಲಾಠಿಚಾರ್ಜ್, ಕಲ್ಲೆಸೆತ ಆಗಿದೆ. ಹಿಂದೂಗಳ ಹತ್ತಾರು ಅಂಗಡಿ ಸುಟ್ಟಿದ್ದಾರೆ. ಆದರೆ ಹಿಂದೂಗಳನ್ನೇ ಪ್ರಮುಖ ಆರೋಪಿಗಳನ್ನಾಗಿ ಮಾಡಿ (ಎ1, ಎ2, ಎ3 ಹೀಗೆ) ಕೇಸು ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ
Advertisement
Advertisement
ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಸಂವಿಧಾನ ಯಥಾವತ್ ಜಾರಿಗೊಳಿಸುವ ಸರ್ಕಾರ ಎಂದು ಕಾಂಗ್ರೆಸ್ಸಿಗರು (Congress) ಹೇಳಿಕೊಳ್ಳುತ್ತಾರೆ. ಬಿಜೆಪಿ ಶಾಸಕ ಮುನಿರತ್ನ (Muniratna)ಅವರ ಮೇಲೆ ಅಟ್ರಾಸಿಟಿ ಕೇಸ್ (Atrocity Case) ಆಗಿದ್ದು, ಬಂಧಿಸಿದ್ದೀರಿ. ಆದರೆ ಒಂದು ತಿಂಗಳಿಗೂ ಹಿಂದೆ ಇದೇ ಅಟ್ರಾಸಿಟಿ ಕೇಸ್ ಕಾಂಗ್ರೆಸ್ಸಿನ ಶಾಸಕ ಚನ್ನಾರೆಡ್ಡಿ ಮೇಲೂ ಆಗಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ರಾಜಾರೋಷವಾಗಿ ಭಾಗವಹಿಸುವ ಅವರನ್ನು ಇನ್ನೂ ಬಂಧಿಸಿಲ್ಲ. ಇದಾ ನಿಮ್ಮ ಪ್ರಜಾಪ್ರಭುತ್ವ? ಇದಾ ನಿಮ್ಮ ಸೆಕ್ಯುಲರಿಸಂ, ಇದಾ ನಿಮ್ಮ ಸಂವಿಧಾನ ಮಾನ್ಯ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ – ಇಬ್ಬರು ಎಂಬಿಎ ವಿದ್ಯಾರ್ಥಿಗಳ ದುರ್ಮರಣ, ಮೂವರು ಗಂಭೀರ
Advertisement
ಇಂದು ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿಗಳು ವೇದಿಕೆಯಲ್ಲಿದ್ದು, ಸಚಿವ ಮಹದೇವಪ್ಪ ಅವರು ಭಾಷಣ ಮಾಡುತ್ತಿದ್ದರು. ಒಬ್ಬ ಯುವಕ ಕಾಂಪೌಂಡ್ ಜಿಗಿದು ವಿವಿಐಪಿ ಗ್ಯಾಲರಿ ದಾಟಿ ವೇದಿಕೆ ಏರುತ್ತಿದ್ದಾನೆ. ಎಲ್ಲರೂ ಗಾಬರಿಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ, ಸಚಿವರು, ವಿಧಾನಸೌಧಕ್ಕೆ ಸೆಕ್ಯೂರಿಟಿ ಇಲ್ಲ. ಸಂಪೂರ್ಣ ಭದ್ರತಾ ವೈಫಲ್ಯ ಆಗಿದೆ. ಗೂಢಚರ ಇಲಾಖೆ, ಗೃಹ ಇಲಾಖೆ, ಪೊಲೀಸ್ ಇಲಾಖೆ ಕರ್ನಾಟಕದಲ್ಲಿ ಏನು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: PUBLiC TV Impact | ಡೆಡ್‌ಲೈನ್ ಟೆನ್ಶನ್‌ನಲ್ಲಿ ಪಾಲಿಕೆ ಯಡವಟ್ಟು – ಬಿಬಿಎಂಪಿಯಿಂದ ಗುಂಡಿ ಮುಚ್ಚುವ ಕಾರ್ಯ ಶುರು!
ಅದೇ ವಿಧಾನಸೌಧದಲ್ಲಿ ಸದನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ. ರಾಮೇಶ್ವರಂ ಕೆಫೆ ಸ್ಫೋಟ ಸಂಭವಿಸಿದೆ. ಈ ಆರೋಪಿಗಳು ಬಿಜೆಪಿ ಕಚೇರಿಯನ್ನು ಗುರಿಯನ್ನಾಗಿ ಮಾಡಿದ್ದರು ಎಂದು ಎನ್‌ಐಎ ವರದಿ ಹೇಳಿದೆ. ಈ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಗೃಹ ಇಲಾಖೆಯನ್ನು ಸಂಪೂರ್ಣವಾಗಿ ಅಲ್ಪಸಂಖ್ಯಾತರ ಕೈಗೆ ಕೊಟ್ಟಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಕೇಸರಿ ಕಲಿಗಳು ಕೆಂಡ – ಸರ್ಕಾರದ ವಿರುದ್ಧ ಅಶ್ವಥ್ ನಾರಾಯಣ್ ತೀವ್ರ ವಾಗ್ದಾಳಿ
ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿಸಿ ಡಾ. ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳುತ್ತಾರೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚಿಸುತ್ತಿದೆ. ಕರ್ನಾಟಕದಲ್ಲಿ ಸಂವಿಧಾನವನ್ನು ಜಾರಿ ಮಾಡುತ್ತಿದ್ದೀರಾ ಎಂದು ಹರಿಹಾಯ್ದರು. ಇದನ್ನೂ ಓದಿ: ದೇಶದ ಮೊದಲ ವಂದೇ ಮೆಟ್ರೋ, 6 ವಂದೇ ಭಾರತ್ ರೈಲು ಸೇವೆಗೆ ಮೋದಿ ಚಾಲನೆ – ಏನಿದರ ವಿಶೇಷ!