ಖಾಸಗಿ ವಿದ್ಯಾಸಂಸ್ಥೆಯಲ್ಲಿ ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿ – 29 ಮಕ್ಕಳು ಅಸ್ವಸ್ಥ

Public TV
2 Min Read
Mandy Food poision

– ಅರುಣಾಚಲ ಪ್ರದೇಶ ಮೂಲದ ಬಾಲಕ ಸಾವು

ಮಂಡ್ಯ: ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.

ಅರುಣಾಚಲ ಪ್ರದೇಶ (Arunachal Pradesh) ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದರು. ಉಳಿದ ಊಟವನ್ನ ತಂದು ಮಕ್ಕಳಿಗೆ ನೀಡಲಾಗಿತ್ತು. ಇದನ್ನೂ ಓದಿ: ದಾವಣಗೆರೆ| ಬ್ಯಾಂಕ್ ದರೋಡೆಗೆ ಬಂದಿದ್ದ ಯುಪಿ ಗ್ಯಾಂಗ್ ಮೇಲೆ ಪೊಲೀಸರಿಂದ ಫೈರಿಂಗ್ – ನಾಲ್ವರು ಅರೆಸ್ಟ್

ಊಟ ಸೇವಿಸಿದ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಶನಿವಾರ ಏರುಪೇರಾಗಿತ್ತು. ಆದರೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸದೇ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು. ಶನಿವಾರ ರಾತ್ರಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು (ಭಾನುವಾರ) ಬೆಳಗ್ಗೆ ಬಾಲಕ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಮಕ್ಕಳನ್ನ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿತ್ತು.

ಅಸ್ವಸ್ಥ 27 ವಿದ್ಯಾರ್ಥಿಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಐವರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಅಭಿಮಾನಿಗಳೊಂದಿಗೆ ‘ಅಪ್ಪು’ ಸಿನಿಮಾ ವೀಕ್ಷಿಸಲಿದ್ದಾರೆ ರಮ್ಯಾ

ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಓ ಮೋಹನ್ ಭೇಟಿ ನೀಡಿ, ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಡನ್ ಆಗಿ ಡೆತ್ ಆಗಿದ್ದಾನೆ. ಪೋಸ್ಟ್ ಮಾರ್ಟಮ್‌ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಬಸ್‌ ಉರುಳಿಸಿ 9 ಮಂದಿ ತೀರ್ಥಯಾತ್ರಿಗಳನ್ನು ಹತೈಗೈದ ಉಗ್ರ ಪಾಕ್‌ನಲ್ಲಿ ಮಟಾಷ್‌

ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರರಾಜ್ಯದವರಾಗಿದ್ದಾರೆ. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ಸಂಬAಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿ

ಅನುಮತಿ ಪಡೆಯದೇ ಆಕ್ರಮವಾಗಿ ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆಯು ಇಟ್ಟುಕೊಂಡಿದೆ ಎಂಬ ಆರೋಪವು ಕೇಳಿಬಂದಿದೆ. ಮೇಘಾಲಯ ರಾಜ್ಯದ ಬುಡಕಟ್ಟು ಮಕ್ಕಳನ್ನು ಇಟ್ಟುಕೊಳ್ಳಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ಪಡೆದಿಲ್ಲ. ಆದರೂ ವಿದ್ಯಾರ್ಥಿಗಳ ಪೋಷಕರಿಂದ ಸಹಿ ಪಡೆದು ವಿದ್ಯಾರ್ಥಿಗಳನ್ನ ವಿದ್ಯಾಸಂಸ್ಥೆ ಇಟ್ಟುಕೊಂಡಿದೆ. ಈ ಬಗ್ಗೆ ಮಾಹಿತಿ ಇದ್ದರೂ ಕಣ್ಣುಮುಚ್ಚಿ ಕುಳಿತಿರುವ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿ

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article