ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.
ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳು (Security Force) ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿವೆ. ಭಯೋತ್ಪಾದಕರನ್ನು ಶರಣಾಗುವಂತೆ ಭದ್ರತಾ ಪಡೆಗಳು ಕೇಳಿದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು
ಬಾರಾಮುಲ್ಲಾ ಎನ್‌ಕೌಂಟರ್‌ನ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗ್‌ಪುರೆ, ಹತ್ಯೆಯಾದ ಭಯೋತ್ಪಾದಕ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯವನಾಗಿದ್ದು, ಲಷ್ಕರ್-ಎ-ತೈಬಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಿದ್ದಾರೆ. ಅಲ್ಲದೇ ಮುಂಬರುವ ಜಿ 20 ಸಭೆಯ ದೃಷ್ಟಿಯಿಂದ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕನಿಗೆ ಜಿ 20 ಸಭೆಯ ಮೊದಲು ದೊಡ್ಡ ಭಯೋತ್ಪಾದಕ ದಾಳಿಯನ್ನು ನಡೆಸುವಂತೆ ಹೇಳಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್
ಮೇ 5 ರಂದು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿ (Rajouri) ಜಿಲ್ಲೆಯ ಅರಣ್ಯದ ಕಂಡಿ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಮೇಜರ್ ಗಾಯಗೊಂಡಿದ್ದರು. ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (PAFF) ದಾಳಿಯ ಹೊಣೆ ಹೊತ್ತುಕೊಂಡಿದೆ. ಪಿಎಎಫ್‌ಎಫ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಂಯೋಜಿತವಾಗಿದೆ. ಇತ್ತೀಚಿಗಷ್ಟೆ ಸೇನೆಯ ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್