ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ ಹಾಗೂ ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ, ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N Ravikumar) ಆಗ್ರಹಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ (IT Raid) ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ರೂ. ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ
Advertisement
Advertisement
ಅಬಕಾರಿ, ಕೈಗಾರಿಕಾ ವಲಯ, ಎಲ್ಲಾ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1 ರಿಂದ 3 ಕೋಟಿ ಲಂಚ (Bribe) ಪಡೆದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್
Advertisement
ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂತಹ ಸಾವಿರಾರು ಕೋಟಿ ಹಣವನ್ನು ಚುನಾವಣೆ (Election) ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ, ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಳಿವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಗ್ರಾಪಂ ಸದಸ್ಯ
Advertisement
ಸೋಮವಾರ ಮತ್ತು ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರಿಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ
ಕರ್ನಾಟಕ ಕಾಂಗ್ರೆಸ್‌ನ ಎಟಿಎಂ: ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ. ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು (Cauveri Water) ಹರಿಸುತ್ತಿದ್ದಾರೆ. ಅದನ್ನೂ ನಿಲ್ಲಿಸಿಲ್ಲ. ಕರ್ನಾಟಕ ಪೂರ್ತಿ ಎಟಿಎಂ ಆಗಿದೆ ಎಂದು ದೂರಿದರು. ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ
ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂ. ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು. ಹಣ ಎರಚಿದ್ದಾರೆ. ರಾಶಿರಾಶಿ ಹಣದ ಮೂಲ ತನಿಖೆ ಆಗಬೇಕು. ಈ ಕುರಿತು ಸಿಎಂ, ಡಿಸಿಎಂ ಸ್ಪಷ್ಟ ಹೇಳಿಕೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಕರವೇ ಪ್ರತಿಭಟನೆ
ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು. ಹಣದ ಕುರಿತು ಹಾರಿಕೆ ಉತ್ತರವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಲ್ಲಿ ಬರ ಇದೆ ಅಂತಾ ಹೈದರಾಬಾದ್‍ನಲ್ಲಿ ಮದುವೆ ಮಾಡ್ಬಾರ್ದಾ?: ಶಿವಾನಂದ ಪಾಟೀಲ್
Web Stories