ಬೆಂಗಳೂರು: ಡಿಸೆಂಬರ್ ತಿಂಗಳಲ್ಲಿ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಈಗ ಭಾರೀ ಇಳಿಕೆಯಾಗಿದ್ದು, ಮಾರುಕಟ್ಟೆಯಲ್ಲಿ ಸದ್ಯ 1 ಕೆ.ಜಿ ಈರುಳ್ಳಿ 20 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
ರೈತರ ಎರಡನೇ ಬೆಳೆ ಮಾರುಕಟ್ಟೆಗೆ ಬಂದಿರುವುದರಿಂದ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಆದರೆ ಈ ನಡುವೆ ಕೇಂದ್ರ ಸರ್ಕಾರ ನಮ್ಮ ದೇಶದ ಈರುಳ್ಳಿ ರಫ್ತನ್ನು ಬ್ಯಾನ್ ಮಾಡಿರುವುದರಿಂದ ರೈತರಿಗೆ ಅನಾನುಕೂಲವಾಗಿದೆ. ಸದ್ಯಕ್ಕೆ ಈಗ ಮಹಾರಾಷ್ಟ್ರ ರಾಜ್ಯದ ಸೋಲಾಪುರ, ನಾಸಿಕ್, ಅಹ್ಮದ್‍ನಗರ್ ಹಾಗೂ ರಾಜ್ಯದ ಬಿಜಾಪುರದಿಂದ ಈರುಳ್ಳಿಯ ಎರಡನೇ ಬೆಳೆ ಬರುತ್ತಿದೆ. ಇದರಿಂದ ಈರುಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.
Advertisement
Advertisement
ಕೇಂದ್ರ ಸರ್ಕಾರ ರೈತರಿಗಾಗುವ ನಷ್ಟ ತಡೆಯಲು ರಫ್ತು ಆರಂಭಿಸಿದರೆ ಒಳಿತಾಗುತ್ತೆ. ಹೀಗಾಗಿ ರಫ್ತನ್ನು ಕೂಡಲೇ ಆರಂಭಿಸಬೇಕಿದೆ ಎಂದು ರೈತರು ಒತ್ತಾಯಿಸುತ್ತಿದ್ದಾರೆ.
Advertisement
ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 20 ರಿಂದ 30 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರಿಗೂ ನಷ್ಟವಾಗುತ್ತಿದೆ. ಸಾರಿಗೆ ವೆಚ್ಚ, ಕೂಲಿ ವೆಚ್ಚಗಳು ಹೆಚ್ಚಾಗಿರುವುದರಿಂದ ರೈತರಿಗೆ ಈರುಳ್ಳಿ ಬೆಲೆ ಇಳಿದಿರೋದು ನಷ್ಟ ಉಂಟುಮಾಡುತ್ತಿದೆ. ರಫ್ತು ಆರಂಭಿಸುವುದರಿಂದ 1 ಕೆ.ಜಿ ಈರುಳ್ಳಿಗೆ 40-50 ರೂಪಾಯಿಗೆ ಬಂದರೆ ರೈತರಿಗೆ ಅನುಕೂಲವಾಗಲಿದೆ ಎಂಬ ಲೆಕ್ಕಚಾರಗಳು ಇದ್ದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ.